ಮಂಗಳೂರು: ಆಪಲ್ ನ ಮ್ಯಾಪಲ್ ಸರ್ವಿಸ್ ಸೆಂಟರ್ ನ ಕಳಪೆ ಸೇವೆಗಳ ವಿರುದ್ಧ ಮ೦ಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎ೦ದು ದಕ್ಷಿಣ ಕನ್ನಡ ಮತ್ತು ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ರಾಜ್ಯ ಸುದ್ದಿ ಮತ್ತು ಮಾಧ್ಯಮ ನಿರ್ವಾಹಕ ವಿವೇಕ್ ಜಿ ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜ್ಯೋತಿ ಸರ್ಕಲ್ ನಿಂದ ಬೆಳಗ್ಗೆ 11 ಗಂಟೆಗೆ ಹೊರಟು ಆಪಲ್ ನ ಸರ್ವಿಸ್ ಸೆಂಟರ್ ಮ್ಯಾಪಲ್ ನ ಎದುರುಗಡೆಯಿಂದ ಕ್ಲಾಕ್ ಟವರ್ ವರಗೆ ನಮ್ಮ ಪ್ರತಿಭಟನಾ ಮೆರವಣಿಗೆ ಮೂಲಕ ಬಂದು ಕ್ಲಾಕ್ ಟವರ್ ನಲ್ಲಿ ನಾವು ನಮ್ಮ ಬೇಡಿಕೆಗಳನ್ನು ಆಪಲ್ ಕಂಪೆನಿಯ ಮುಂದೆ ಇಡಲಿದ್ದೇವೆ“ .ನಮ್ಮಲ್ಲಿ ಹಾಗು ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್ ನ ಸರ್ವಿಸ್ ಸೆಂಟರ್ ಮ್ಯಾಪಲ್ ಅನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಕೋರಿದಾಗ ಅವರ ಉಡಾಫೆ ಉತ್ತರ ಗ್ರಾಹಕರಿಗೆ ಆಘಾತ ಉಂಟು ಮಾಡಿದೆ. ಗ್ರಾಹಕರ ಹಿತದೃಷ್ಟಿಯಿಂದ, ಆಪಲ್ ನ ಮ್ಯಾಪಲ್ ಸರ್ವಿಸ್ ಸೆಂಟರ್ ನ ಕಳಪೆ ಸೇವೆಗಳ ವಿರುದ್ಧ ಪ್ರತಿಭಟನೆ ನಡೆಸುವ ಅನಿವಾರ್ಯತೆ ಉಂಟಾಗಿದೆ ಎ೦ದವರು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಚೇರ್ ಮೆನ್ ಗುರುದತ್ ಕಾಮತ್, ಅಧ್ಯಕ್ಷ ರಾಜೇಶ್ ಮಾಬಿಯಾನ್, ಕಾರ್ಯದರ್ಶಿ ಇಮ್ರಾನ್, ಸ್ಥಾಪಕ ಅಧ್ಯಕ್ಷ ಸಲೀಮ್, ಮಾಜಿ ಅಧ್ಯಕ್ಷ ಶೈಲೇಂದ್ರ ಸರಳಾಯ, ಉಪಾಧ್ಯಕ್ಷ ಅಝರ್ ಮೊಹಮದ್ ಮತ್ತಿತರರು ಉಪಸ್ಥಿತರಿದ್ದರು.