22 C
Karnataka
Friday, November 15, 2024

ಸೆ25: ಉಳ್ಳಾಲದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ಮಂಗಳೂರು: ಸೆಪ್ಟೆಂಬರ್ 25 ರಂದು ಬೆಳಿಗ್ಗೆ 11 ಗಂಟೆಯಿಂದ ಉಳ್ಳಾಲ ನಗರಸಭೆ ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಲಿದೆ.

ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು.ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು.

ಅರ್ಜಿದಾರರು ನಮೂನೆ I & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು. 

ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಛೇರಿ ದೂರವಾಣಿ ಸಂಖ್ಯೆ 0824–2950997. 9364062517. ಪೊಲೀಸ್ ಉಪಾಧೀಕ್ಷಕರ ಕಛೇರಿ, ದೂರವಾಣಿ ಸಂಖ್ಯೆ 0824 –2453420 9364062579. ಪೊಲೀಸ್ ನಿರೀೀಕ್ಷಕರು-1 ಕಛೇರಿ, ದೂರವಾಣಿ ಸಂಖ್ಯೆ 0824-2427237 9364062691. ಪೊಲೀಸ್ ನಿರೀೀಕ್ಷಕರು-2 ಕಛೇರಿ, ದೂರವಾಣಿ ಸಂಖ್ಯೆ 0824-2427237 9364062692. ಪೊಲೀಸ್ ನಿರೀೀಕ್ಷಕರು-3 ಕಛೇರಿ, ದೂರವಾಣಿ ಸಂಖ್ಯೆ 0824-2427237 9364062693. ಪೊಲೀಸ್ ನಿರೀೀಕ್ಷಕರು-4 ಕಛೇರಿ, ದೂರವಾಣಿ ಸಂಖ್ಯೆ 0824-2427237 9364062694 ಸಂರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles