24.9 C
Karnataka
Friday, November 15, 2024

ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ: 10.45 ಕೋಟಿ ರೂ. ನಿವ್ವಳ ಲಾಭ

ಮ೦ಗಳೂರು: ಎಂ.ಸಿ.ಸಿ. ಬ್ಯಾಂಕಿನ ವಾರ್ಷಿಕ ಮಹಾಸಭೆಯು ಸೆ.22.ರಂದು ಮಂಗಳೂರಿನ ಸಂತ ಆಲೋಶಿಯಸ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ(ಲೊಯೊಲಾ ಹಾಲ್) ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ, ಉಪಾಧ್ಯಕ್ಷ ಜೆರಾಲ್ಡ್‌ ಜೂಡ್ ಡಿಸಿಲ್ವಾ ಮತ್ತು ನಿರ್ದೇಶಕ ಡೇವಿಡ್ ಡಿಸೋಜ ಅವರು ಜ್ಯೋತಿ ಬೆಳಗಿಸುವ ಮೂಲಕ ಸಭೆಯನ್ನು ಆರಂಭಿಸಲಾಯಿತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್
ಲೋಬೊ, ಉಪಾಧ್ಯಕ್ಷ ಜೆರಾಲ್ಡ್‌ ಜೂಡ್ ಡಿಸಿಲ್ವಾ, ಸದಸ್ಯರಾದ ಎಡ್ಮಂಡ್ ಫ್ರಾಂಕ್ (ಮಾಜಿ ಉಪಾಧ್ಯಕ್ಷರು ಎಂ.ಸಿ.ಸಿ. ಬ್ಯಾಂಕ್), ಬ್ಯಾಂಕಿನ ಸದಸ್ಯರಾದ ರೋನ್ಸ್‌ ಬಂಟ್ವಾಳ್, ರೋಹನ್ ಮೊ೦ತೇರೊ,(ಮ್ಯಾನೇಜಿಂಗ್ ಡೈರೆಕ್ಟರ್, ರೋಹನ್ ಕಾರ್ಪೊರೇಶನ್)
ಪಿಯುಸ್ ಎಲ್. ರೊಡ್ರಿಗಸ್(ಮಾಜಿ ನಿರ್ದೇಶಕರು ಪರಿಸರ ಮಾಲಿನ್ಯ ಮತ್ತು ನಿಯಂತ್ರಣ ಮಂಡಳಿ) ಮತ್ತು ಲುವಿ ಪಿಂಟೊ (ಅಧ್ಯಕ್ಶರು,ಮಾಂಡ್ ಸೊಭಾಣ್) ಅವರು ಎಲ್ಲಾ ಸದಸ್ಯರ ಪರವಾಗಿ ಬ್ಯಾಂಕಿನ ಸ್ಥಾಪಕರಿಗೆ ಪುಷ್ಪಾಂಜಲಿ ಅರ್ಪಿಸುವ ಮೂಲಕ ಗೌರವಿಸಿದರು.


ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರು ಎಂ.ಸಿ.ಸಿ. ಬ್ಯಾಂಕ್ ಎಂದು ಪ್ರಖ್ಯಾತವಾಗಿರುವ ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸಿದ್ದು 2023-24ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10 ಲಾಭಾಂಶ ಘೋಷಿಸಿರುತ್ತದೆ. ಜೊತೆಗೆ, ಬ್ಯಾಂಕ್ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.10.45 ಕೋಟಿಯಾಗಿರುತ್ತದೆ. ಇದು ಬ್ಯಾಂಕಿನ ಚರಿತ್ರೆಯಲ್ಲಿಯೇ ಅತ್ಯಂತ ಹೆಚ್ಚಿನ ಲಾಭ ಎಂದು ಹೇಳಿದರು.
ಎಂ.ಸಿ.ಸಿ.ಬ್ಯಾಂಕ್ ಒಟ್ಟು ಠೇವಣಿಯಲ್ಲಿ ಶೇಕಡಾ 10 ಪ್ರಗತಿ ಸಾಧಿಸಿದ್ದು, ರೂ.635.70 ಕೋಟಿ ಠೇವಣಿ, ಒಟ್ಟು ಮುಂಗಡದಲ್ಲಿ ಶೇಕಡಾ 25.21 ಪ್ರಗತಿ ಸಾಧಿಸಿದ್ದು ರೂ.444.88 ಕೋಟಿ ಮುಂಗಡಗಳು, ದುಡಿಯುವ ಬಂಡವಾಳ ರೂ.752.95 ಕೋಟಿ
(ಪ್ರಗತಿ ಶೇಕಡಾ 10.03) ಮತ್ತು ಶೇರು ಬಂಡವಾಳ ರೂ.31.21 ಕೋಟಿ (ಪ್ರಗತಿ ಶೇಕಡಾ 14.07) ಆಗಿದೆ ಎಂದರು. ಜೊತೆಗೆ ಬ್ಯಾಂಕಿನ ಎನ್.ಪಿ.ಎ. ಪ್ರಮಾಣವು ಕಳೆದ ಆರ್ಥಿಕ ವರ್ಷದಲ್ಲಿದ್ದ 1.37% ರಿಂದ 1.12%ಕ್ಕೆ ತಲುಪಿರುವುದು ಬ್ಯಾಂಕಿನ ಬೆಳವಣಿಗೆ ಉತ್ತಮವಾಗಿದೆ
ಎಂಬುದನ್ನು ತೋರಿಸುತ್ತದೆ. ಬ್ಯಾಂಕಿನ ಅನುತ್ಪಾದಕ ಸಾಲಕ್ಕೆ ಒದಗಿಸಿದ ಅವಕಾಶದ ಅನುಪಾತವು 78.34% ಆಗಿರುತ್ತದೆ. ಬ್ಯಾಂಕ್ 2023-24ನೇ ಆರ್ಥಿಕ ವರ್ಷದಲ್ಲಿ ಒಂದು ಸಾವಿರ ಕೋಟಿ ವ್ಯವಹಾರದ ಮೈಲುಗಲ್ಲನ್ನು ದಾಟಿರುತ್ತದೆ. ಬ್ಯಾಂಕ್ ಲೆಕ್ಕ ಪರಿಶೋಧನೆಯಲ್ಲಿ
ಸತತವಾಗಿ ಎ ಶ್ರೇಣಿಯ ಬ್ಯಾಂಕಾಗಿ ಗುರುತಿಸಲ್ಪಟ್ಟಿದ್ದು ಬ್ಯಾಂಕ್ ಆರ್ಥಿಕವಾಗಿ ಸುಧೃಡವಾಗಿದೆ ಎಂಬುದನ್ನುತೋರಿಸುತ್ತದೆ..ಬ್ಯಾಂಕಿನ ಪ್ರಗತಿಗೆ ಕಾರಣರಾದ ಗ್ರಾಹಕರು, ಸದಸ್ಯರು, ಸಿಬ್ಬಂದಿ ವರ್ಗ ಮತ್ತು ಹಿತೈಷಿಗಳನ್ನು
ಅಭಿನಂದಿಸುತ್ತೇನೆ ಎ೦ದರು..
ಉಪಾಧ್ಯಕ್ಷ ಜೆರಾಲ್ಡ್‌ ಜೂಡ್ ಡಿಸಿಲ್ವಾ 105ನೇ ವಾರ್ಷಿಕ ಸಾಮಾನ್ಯ ಸಭೆಯ ವರದಿಗಳನ್ನು ಓದಿದರು. 2023-24ರ ಲೆಕ್ಕ ಪರಿಶೋಧಿತ ಹಣಕಾಸು, ಲೆಕ್ಕ ಪರಿಶೋಧನಾ ವರದಿ, 2024-25ರ ಆರ್ಥಿಕ ವರ್ಷದ ಚಟುವಟಿಕೆಗಳ ಕಾರ್ಯಕ್ರಮ ಮತ್ತು 2024-25ರ ಬಜೆಟ್ ಅನ್ನು
ಸಾಮಾನ್ಯ ಸಭೆಯ ಮುಂದೆ ಮಂಡಿಸಿ, ಅನುಮೋದನೆ ಪಡೆಯಲಾಯಿತು.
ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅಧ್ಯಕ್ಷರು, ಸದಸ್ಯರು ನೀಡಿದ ಸಲಹೆ ಸೂಚನೆಗಳನ್ನು ಪರಿಗಣನೆಗೆ ತೆಗೆದುಕೊಂಡು ಮುಂದಿನ ವರ್ಷದಲ್ಲಿ ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ನಿರ್ದೇಶಕರಾದ ಅಂಡ್ರ್ಯೂ ಡಿಸೋಜ, ಜೋಸೆಫ್ ಎಮ್. ಅನಿಲ್ ಪತ್ರಾವೊ, ಡಾ ಜೆರಾಲ್ಡ್‌ ಪಿಂಟೊ, ಡೇವಿಡ್ ಡಿಸೋಜ, ಎಲ್‌ರೊಯ್ ಕಿರಣ್ ಕ್ರಾಸ್ಟೊ, ರೋಶನ್ ಡಿಸೋಜ, ಹೆರಾಲ್ಡ್‌ ಮೊಂತೇರೊ, ಜೆ. ಪಿ. ರೊಡ್ರಿಗಸ್, ವಿನ್ಸೆಂಟ್ ಲಸ್ರಾದೊ, ಮೆಲ್ವಿನ್ ವಾಸ್, ಐರಿನ್ ರೆಬೆಲ್ಲೊ, ಡಾ ಫ್ರೀಡಾ ಡಿಸೋಜ, ವೃತ್ತಿಪರ ನಿರ್ದೇಶಕರಾದ ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಮಹಾಪ್ರಬಂಧಕ ಸುನಿಲ್ ಮಿನೇಜಸ್, ಉಪ ಮಹಾಪ್ರಬಂಧಕ ರಾಜ್ ಎಫ್. ಮಿನೇಜಸ್ ಉಪಸ್ಥಿತರಿದ್ದರು.
ಮಹಾಪ್ರಬಂಧಕ ಸುನಿಲ್ ಮಿನೇಜಸ್ ಸ್ವಾಗತಿಸಿ, ಬ್ರಹ್ಮಾವರ ಶಾಖಾ ವ್ಯವಸ್ಥಾಪಕ ಒವಿನ್ ರೆಬೆಲ್ಲೊನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles