ಮ೦ಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಸಾವಿರಾರು ಕೋಟಿ ರೂ. ಗಳ ಮೂಡಾ ಹಗರಣದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಿದ ರಾಜ್ಯದ ಉಚ್ಚ ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದ್ದು ಸಿದ್ದರಾಮಯ್ಯನವರು ತನಿಖೆಯ ದೃಷ್ಟಿಯಿಂದ ಇನ್ನಾದರೂ ರಾಜೀನಾಮೆ ನೀಡಲಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು
ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಒಂದೊಂದು ಹಗರಣಗಳಿಗೂ ನ್ಯಾಯಾಲಯದಿಂದ ಇಂತಹದೇ ತೀರ್ಪು ಬಂದಲ್ಲಿ ಇಡೀ ಸಚಿವ ಸಂಪುಟವೇ ರಾಜೀನಾಮೆ ನೀಡುವ ಸ್ಥಿತಿ ನಿರ್ಮಾಣವಾಗಲಿದ್ದು ಆ ಮೂಲಕ ಭ್ರಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರದಿಂದ ತೊಲಗುವುದು ಖಚಿತವೆಂದು ಶಾಸಕರು ಹೇಳಿದರು.
ಪ್ರತಿಭಟನೆಯಲ್ಲಿ ಶಾಸಕರುಗಳಾದ ಡಾ.ಭರತ್ ಶೆಟ್ಟಿ, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ಮೇಯರ್ ಮನೋಜ್ ಕೋಡಿಕಲ್, ಉಪಮೇಯರ್ ಭಾನುಮತಿ ಪಿ.ಎಸ್, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ದಿವಾಕರ ಪಾಂಡೇಶ್ವರ, ಸುಧೀರ್ ಶೆಟ್ಟಿ ಕಣ್ಣೂರು, ಜಗದೀಶ್ ಶೇಣವ, ನಂದನ್ ಮಲ್ಯ, ರಮೇಶ್ ಹೆಗ್ಡೆ, ಮಂಜುಳಾ ರಾವ್, ಮಹೇಶ್ ಜೋಗಿ, ಪೂಜಾ ಪೈ, ಯತೀಶ್ ಅರ್ವರ್, ರವೀಂದ್ರ ಶೆಟ್ಟಿ, ಪಾಲಿಕೆ ಸದಸ್ಯರುಗಳು, ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.