ಮಂಗಳೂರು: ರಾಜ್ಯಕ್ಕೆ ಕರ್ನಾಟಕ ಹೆಸರು ನಾಮಕರಣವಾದ 50 ವರ್ಷದ ಹಿನ್ನೆಲೆ, ಸುವರ್ಣ ಕರ್ನಾಟಕ ಸಂಭ್ರಮದ ಸಲುವಾಗಿ ರಥಯಾತ್ರೆ ಕಳೆದ ನವೆಂಬರ್ ಒಂದರಿಂದ ರಾಜ್ಯದಾದ್ಯಂತ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಸಂಚರಿಸುತ್ತಿದ್ದು ಗುರುವಾರ ಸುವರ್ಣ ಕರ್ನಾಟಕ ಸಂಭ್ರಮ ರಥವು ನಗರದ ಕುದ್ಮುಲ್ ರಂಗರಾವ್ ಪುರಭವನಕ್ಕೆ ಆಗಮಿಸಿತು. ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆ ಸರಳವಾಗಿ ಅಧಿಕಾರಿಗಳು ರಥವನ್ನು ಸ್ವಾಗತಿಸಿದರು.
ರಥವನ್ನು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್ ಆನಂದ್, ಮಂಗಳೂರು ನಗರ ಪೆÇಲೀಸ್ ಅಧೀಕ್ಷಕ ಯತೀಶ್, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ತಾಲೂಕು ಆರೋಗ್ಯಾಧಿಕಾರಿ ಸುಜಯ್ ಭಂಡಾರಿ, ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್, ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಅಧ್ಯಕ್ಷ ರೇವಣ್ಕರ್, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ, ಸಾಹಿತಿಗಳು ವಿವಿಧ ಇಲಾಖೆಯ ಅಧಿಕಾರಿಗಳು ರಥವನ್ನು ಸ್ವಾಗತಿಸಿದರು.