21.2 C
Karnataka
Saturday, November 16, 2024

ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲಗಳ ಸಂಚಾರ

ಮ೦ಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನುಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ.

ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 06597 ಅಕ್ಟೋಬರ್ 30ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಮಧ್ಯಾಹ್ನ 1 ಗಂಟೆಗೆ
ಹೊರಡಲಿರುವ ಈ ರೈಲು ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು,ಬಂಟವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣರೋಡ್ ಮತ್ತು ಅಂಕೋಲಾ ನಿಲ್ದಾಣಗಳ ಮೂಲಕ ಮರುದಿನ ಬೆಳಗಿನ ಜಾವ 4 ಗಂಟೆಗೆ ಕಾರವಾರ ನಿಲ್ದಾಣವನ್ನು ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ಪುನಃ ಇದೇ ರೈಲು (06598) ಅಕ್ಟೋಬರ್ 31 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ
ಹೊರಡಲಿರುವ ರೈಲು ಅದೇ ಮಾರ್ಗವಾಗಿ, ಮರುದಿನ ಬೆಳಗಿನ ಜಾವ್ 4 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ .
ಈ ರೈಲಿನಲ್ಲಿ 4 ಜನರಲ್ ಸೆಕೆಂಡ್ ಕ್ಲಾಸ್, 10 ಸ್ಲೀಪರ್ ಕ್ಲಾಸ್, 2 ಎಸಿ ತ್ರಿ ಟೈಯರ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ / ಬ್ರೇಕ್
ವ್ಯಾನ್ಗಳು ಸೇರಿದಂತೆ 18 ಬೋಗಿಗಳು ಇರಲಿವೆ.
ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06565/66) ರೈಲು ಸಂಚಾರ
ರೈಲು ಸಂಖ್ಯೆ 06565 ಅಕ್ಟೋಬರ್ 30ರಂದು ಯಶವಂತಪುರದಿಂದ ರಾತ್ರಿ 11.50ಕ್ಕೆ ಹೊರಡಲಿರುವ ಈ ರೈಲು ಕುಣಿಗಲ್,
ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ
11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ಪುನಃ ಇದೇ ರೈಲು (06566) ಅಕ್ಟೋಬರ್ 31 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಂಕ್ಷನ್
ನಿಂದ ಹೊರಡಲಿರುವ ರೈಲು ಅದೇ ಮಾರ್ಗವಾಗಿ ಅದೇ ದಿನ ರಾತ್ರಿ 9:15 ಕ್ಕೆ ಯಶವಂತಪುರವನ್ನು ತಲುಪಲಿದೆ.
ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್
ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನದ ಸಮಯ ಮತ್ತು ಇತರ ವಿವರಗಳನ್ನು ಪರಿಶೀಲಿಸಬಹುದು ಎ೦ದು ನೈಋತ್ಯ ರೈಲ್ವೆ ಪ್ರಕಟನೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles