21.6 C
Karnataka
Thursday, November 14, 2024

ನ.16: 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ-ಡಾ.ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು: “71ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು “ವಿಕಸಿತ ಭಾರತ” ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ಧೈಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅದೇ ರೀತಿಯಲ್ಲಿ ರಾಜ್ಯಮಟ್ಟದ
ಏಳು ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ. ಮಂಗಳೂರಿನಲ್ಲಿ ನವೆಂಬರ್ 16 ರಂದು “ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ಎಂಬ ವಿಷಯದೊಂದಿಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಪೂರ್ವಾಹ್ನ 10 ಗಂಟೆಗೆ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಯಾಗಿದೆ“ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
”ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನೇತೃತ್ವದಲ್ಲಿ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ. ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣಸಹಕಾರ ಬ್ಯಾಂಕ್‌ಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ“ ಎಂದವರು ವಿವರಿಸಿದರು..
”ನವೆಂಬರ್ 16ರಂದು ನಡೆಯುವ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನುಅರ್ಥಪೂರ್ಣವಾಗಿಸುವ ಉದ್ದೇಶದಿಂದ ವಸ್ತುಪ್ರದರ್ಶನ ಮಳಿಗೆಗಳನ್ನು ಆಯೋಜಿಸಲಾಗಿದ್ದು, ಇದರಉದ್ಘಾಟನೆಯನ್ನು ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಇವರು ನೆರವೇರಿಸಲಿದ್ದಾರೆ. ಸಹಕಾರ ಸಪ್ತಾಹದ ಉದ್ಘಾಟನೆಯನ್ನು ಮಾನ್ಯ ಸಹಕಾರ ಸಚಿವ ಕೆ.ಎನ್. ರಾಜಣ್ಣರವರು ನೆರವೇರಿಸಲಿರುವರು. “ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ”ವನ್ನು
ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದಾರೆ. “ಶತಮಾನೋತ್ಸವ ಪೂರೈಸಿದ ಸಹಕಾರ ಸಂಘಗಳಿಗೆ ಪುರಸ್ಕಾರ”ವನ್ನು ಶಾಸಕರು ಹಾಗೂಕರ್ನಾಟಕ ಸರಕಾರದ ಮಾಜಿ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಇವರು ಮಾಡಲಿರುವರು ಎಂದರು.

“ಉತ್ತಮ ಸ್ವ-ಸಹಾಯ ಸಂಘಗಳಿಗೆ ಪುರಸ್ಕಾರವನ್ನು ಮಾನ್ಯ ಶಾಸಕರು ಹಾಗೂ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಅಧ್ಯಕ್ಷರಾದ ಜಿ.ಟಿ. ದೇವೇಗೌಡ ಇವರು ಮಾಡಲಿರುವರು. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೆರವೇರಿಸಲಿರುವರು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಮಂಗಳೂರು ಇದರ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್‌ವಹಿಸಲಿರುವರು. “ಸಹಕಾರ ಜಾಥಾ” ಉದ್ಘಾಟನೆಯನ್ನು ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ
ಡಾ। ಭರತ್ ಶೆಟ್ಟಿ ವೈ., ಕರ್ನಾಟಕ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಶಾಸಕರು ಹಾಗೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳ ನಿ., ಮಂಗಳೂರು ಇದರ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ, ವಿಧಾನ ಪರಿಷತ್ ಸದಸ್ಯರುಗಳಾದ ಐವನ್ ಡಿ.ಸೋಜ ಹಾಗೂ ಕಿಶೋರ್ ಕುಮಾರ್ ಬೊಟ್ಯಾಡಿ ಇವರುಭಾಗವಹಿಸಲಿರುವರು. ನಬಾರ್ಡ್, ಬೆಂಗಳೂರು ಇದರ ಮುಖ್ಯ ಮಹಾಪ್ರಬಂಧಕರಾದ ಕೆ.ವಿ.ಎಸ್.ಎಸ್.ಎಲ್.ವಿ.
ಪ್ರಸಾದ್ ರಾವ್, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು ಇದರ ಅಧ್ಯಕ್ಷರಾದ ಕೆ. ಪಿ. ಸುಚರಿತ ಶೆಟ್ಟಿ ಇವರು ಗೌರವ ಉಪಸ್ಥಿತರಿರುವರು.ವಿಶೇಷ ಆಹ್ವಾನಿತರಾಗಿ ಅಜಯ್ ನಾಗಭೂಷಣ್ ಎಂ. ಎನ್., ಶ್ ಟಿ. ಎಚ್.ಎಂ. ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ, ಕಮಿಷನರ್ ಅನುಪಮ್ ಅಗರ್ ‌ವಾಲ್ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು..

ಪತ್ರಿಕಾಗೋಷ್ಟಿಯಲ್ಲಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಜಿಲ್ಲಾ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕೆಎಂಎಫ್ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಬ್ಯಾಂಕ್ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಶಶಿಕುಮಾರ್ ರೈ, ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರ್, ಪಿ.ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಎಸ್. ರಾಜು ಪೂಜಾರಿ, ರವೀಂದ್ರ ಕಂಬಳಿ, ಸಹಕಾರಿ ಸಂಘಗಳ ಉಪನಿಬಂಧಕ ಹೆಚ್. ಎನ್. ರಮೇಶ್, ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.
.
“ಸಹಕಾರ ಮಾಣಿಕ್ಯ ಪ್ರಶಸ್ತಿ“!

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸಿ 2024ನೇ ಸಾಲಿನಿಂದ ”ಸಹಕಾರ ಮಾಣಿಕ್ಯ“ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಪ್ರಶಸ್ತಿ ಜೊತೆಗೆ 5 ಗ್ರಾಂ. ಚಿನ್ನದ ಪದಕ, 10000 ರೂ. ನಗದು ಹಾಗೂ ಪಾರಿತೋಷಕ ನೀಡಲಾಗುವುದು ಎ೦ದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ವಿವರಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles