21.6 C
Karnataka
Thursday, November 14, 2024

ಕನ್ನಡ ಮಾಧ್ಯಮ ಶಾಲೆಗಳಿಂದ ಸಂಸ್ಕೃತಿ ಉಳಿವು- ಸಿಎ ಶಾಂತಾರಾಮ ಶೆಟ್ಟಿ

ಮಂಗಳೂರು : ಭಾಷೆ ಒಂದು ನಾಡಿನ ಸಂಸ್ಕೃತಿಯ ಜೀವಾಳ. ಕನ್ನಡ ಭಾಷೆ ಸಂಸ್ಕೃತಿ ಉಳಿಯ ಬೇಕಾದರೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ ಎಂದು ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.
ಅಖಿಲ ಭಾರತೀಯ ಸಾಹಿತ್ಯ ಪರಿಷದ್ (ಅಭಾಸಾಪ) ಕರ್ನಾಟಕ ಇದರ ವತಿಯಿಂದ ಕಲ್ಲಡ್ಕದ ಶ್ರೀ ರಾಮ ಶಾಲೆಯಲ್ಲಿ ಭಾನುವಾರ ನಡೆದ ಕನ್ನಡ ಶಾಲೆಗಳ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ‘ರಾಷ್ಟ್ರೀಯ ಭಾವನೆಗಳು ಜಾಗೃತ ಗೊಳ್ಳಬೇಕಾದರೆ ಮಾತೃಭಾಷೆಯ ಶಿಕ್ಷಣ ಅಗತ್ಯ ಎಂದರು.
ದಿಕ್ಸೂಚಿ ಭಾಷಣ ಮಾಡಿದ ರಾಜ್ಯ ಸಂಪರ್ಕ ಪ್ರಮುಖ್ ಡಾ. ವಿ. ರಂಗನಾಥ ಅವರು ಭಾರತೀಯ ಭಾಷೆಗಳ ನಡುವೆ ಇರಬೇಕಾದುದು ಸಾಮರಸ್ಯವೇ ವಿನಾ ಸಂಘರ್ಷವಲ್ಲ ಎಂದರು. ಕನ್ನಡ ಶಾಲೆ ಸವಾಲು ಮತ್ತು ಸಮಾಧಾನ ವಿಷಯದ ಬಗ್ಗೆ ನಡೆದ ವಿಚಾರಗೋಷ್ಠಿ ಶಿಕ್ಷಣ ತಜ್ಞ ರಾಜಾರಾಮ ಹೊಳೆಹೊನ್ನೂರು ವಿಷಯ ಮಂಡಿಸಿದರು.
ಶ್ರದ್ಧೆ ಇದ್ದಾಗ ಏಕಾಗ್ರತೆ, ಗ್ರಹಿಕೆ,ಹೇಳುವ ಸಾಮರ್ಥ್ಯ, ಕ್ರಿಯಾಶೀಲತೆಯಿಂದ ಉತ್ತಮ ಫಲಿತಾಂಶ ದೊರಕುತ್ತದೆ. ವಿಷಯಗಳನ್ನುಮಾತೃ ಭಾಷೆಯಲ್ಲಿ ಕಲಿಸುವುವುದರಿಂದ ಭಾವನೆಗಳು ಅರಳಲು ಸಾಧ್ಯ ವಾಗುವುದು ಎಂದು ಉದಾಹರಣೆಗಳ ಮೂಲಕ ವಿವರಿಸಿದರು.
ಗುಣ ಆಧಾರಿತ ಶಿಕ್ಷಣ -ಡಾ.ಪ್ರಭಾಕರ ಭಟ್
ರಾಜ್ಯದ ಉತ್ತಮ ಕನ್ನಡ ಶಾಲೆಗಳ ಮುಖ್ಯಸ್ಥರನ್ನು ಸನ್ಮಾನಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ ಇಂದಿನ ಶಿಕ್ಷಣ ಹಣ ಆಧಾರಿತವಾಗಿದೆ. ನಮಗೆ ಗುಣ ಅಧಾರಿತ ಶಿಕ್ಷಣ ಅವಶ್ಯವಾಗಿದೆ. ದೀಪದಿಂದ ದೀಪ ಹಚ್ಚಿದಂತೆ ಜ್ಞಾನವನ್ನು ಪಸರಿಸಬೇಕು.ಕನ್ನಡ ಭಾಷೆ ಬೆಳೆಸಿದರೆ ಜಗತ್ತಿನ ಭಾಷೆಗಳಗೆ ಶಕ್ತಿ ನೀಡಿದಂತಾಗುತ್ತದೆ.ಭಾರತದಲ್ಲಿ ಕೊನೆಗೆ ಗೆಲ್ಲುವುದು ಧರ್ಮವೇ ಹೊರತು ಅಧರ್ಮವಲ್ಲ ಎಂದರು.
ಅಭಾಸಾಪ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್, ಸಂಘಟನಾ ಕಾರ್ಯದರ್ಶಿ ನಾರಾಯಾಣ ಶೇವಿರೆ , ಕಾರ್ಯದರ್ಶಿ ಶೈಲೇಶ್ ಮಂಗಳೂರು, ವಿಭಾಗ ಸಂಯೋಜಕ ಸುಂದರ ಇಳಂತಿಲ, ಕಾರ್ಯಕಾರಿ ಸಮಿತಿ ಸದಸ್ಯ ಡಾ.ಮಾಧವ.ಎಂ.ಕೆ., ಬಂಟ್ವಾಳ ತಾಲೂಕು ಅಧ್ಯಕ್ಷ ರಾಜಮಣಿ ರಾಮಕುಂಜ ಉಪಸ್ಥಿತರಿದ್ದರು.
ಅಭಾಸಾಪ ದ.ಕ.ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ ರೈ ಸ್ವಾಗತಿಸಿ, ಮಧುರಾ ಕಡ್ಯ ವಂದಿಸಿದರು. ಅಶೋಕ ಕಲ್ಯಾಟೆ ಮತ್ತು ಡಾ.ಮೀನಾಕ್ಷಿ ರಾಮಚಂದ್ರ ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನಗೊಂಡ ಶಾಲೆಗಳು

  • ಜೈಹಿಂದ್ ಪ್ರೌಢ ಶಾಲೆ ಅಂಕೋಲಾ *ಜ್ಞಾನಗಂಗೋತ್ರಿ ಹಿರಿಯ ಪ್ರಾಥಮಿಕ ಶಾಲೆ ಶಹಾಪುರ, ಯಾದಗಿರಿ *ಶಾಂತಿಧಾಮ ಪೂರ್ವ ಗುರುಕುಲ ಕೋಟೇಶ್ವರ * ವನಿತಾ ಸದನ ಕೃಷ್ಣಮೂರ್ತಿಪುರಂ, ಮೈಸೂರು * ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಪುತ್ತೂರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles