17.2 C
Karnataka
Saturday, January 11, 2025

ಗ್ರಾಮ ಪಂಚಾಯತ್ ಸದಸ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ: ಮಂಜುನಾಥ ಭಂಡಾರಿ

ಸುಳ್ಯ: ಗ್ರಾಮ ಪಂಚಾಯತ್ ಸದಸ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದಾಗಿ ಶಾಸಕ ಮಂಜುನಾಥ ಭಂಡಾರಿ ಹೇಳಿದ್ದಾರೆ.
ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ ಪಂಚಾಯತ್ ರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು ಪಂಚಾಯತ್ ಸದಸ್ಯರ ವಿವಿಧ ಬೇಡಿಕೆಗೆ ದ್ವನಿಯೆತ್ತಿ ಸ್ಪಂದಿಸಿದ್ದೇನೆ, ಮುಂದೆಯೂ ನಿಮ್ಮ ಪರವಾಗಿ ಕೆಲಸ ಮಾಡುತ್ತೇನೆ ಎಂದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ರಾಜಣ್ಣ, ಗ್ರಾಮ ಸ್ವರಾಜ್ ಪ್ರತಿಷ್ಠಾನ(ರಿ) ರ ಅಧ್ಯಕ್ಷ ಕುಳಾಲು ಸುಭಾಷ್ಚಂದ್ರ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles