23 C
Karnataka
Friday, May 1, 2026

ಶಕ್ತಿನಗರಕ್ಕೆ ಸರಕಾರಿ ಬಸ್‌: ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

ಮಂಗಳೂರು: ಶಕ್ತಿನಗರದ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಬಸ್ ಪ್ರಯಾಣದ ಬಸ್ ಚಾಲನೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡು ಬಸ್ ಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾಯ೯ದಶಿ೯ ಪದ್ಮರಾಜ್ ಆರ್. ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು, ಮಾನವ ಹಾಗೂ ಮಾಹಿತಿ ಹಕ್ಕು ಘಟಕದ ಅಧ್ಯಕ್ಷ ಮನೋರಾಜ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜ ಹಾಗೂ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಿಳೆಯರ ಬಸ್ ಬೇಡಿಕೆಯ ಕುರಿತು ಮಂಜುನಾಥ ಭಂಡಾರಿಯವರು ಈ ಹಿಂದೆ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಅದೀಗ ನೆರವೇರಿರುವುದು ಈ ಭಾಗದ ನಾಗರಿಕರ ಸಂತಸಕ್ಕೆ ಕಾರಣವಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles