19.1 C
Karnataka
Thursday, December 12, 2024

ಮಜಿಬೈಲು ಕಾರ್ತಿಕ್ ಶೆಟ್ಟಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

ಮ೦ಗಳೂರು ಮಜಿಬೈಲು ಕಾರ್ತಿಕ್ ಶೆಟ್ಟಿಯವರ ಸಾಮಾಜಿಕ ಸೇವೆಯನ್ನು ಗುರುತಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಡಿ.7 ರಂದು ಮುಂಬಯಿಯ ಕುರ್ಲದ ಬಂಟರ ಭವನದಲ್ಲಿ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗೂ ಪ್ರವೀಣ್ ಭೋಜ ಶೆಟ್ಟಿಯವರ ನೇತೃತ್ವದ ಮುಂಬಯಿ ಬಂಟರ ಸಂಘದ ಸಹಯೋಗದೊಂದಿಗೆ ಜರಗಿದ ‘ವಿಶ್ವ ಬಂಟರ ಸಮಾಗಮ-2024’ ಕಾರ್ಯಕ್ರಮದಲ್ಲಿ ಅದ್ದೂರಿಯಾಗಿ ಗೌರವಿಸಲಾಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಹಾದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬೋಜ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಜತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ,ಮಾಹ ಪೋಷಕರು, ನಿರ್ದೇಶಕರು ಉಪಸ್ಥಿತರಿದ್ದರು. ಕರ್ನೂರು ಮೋಹನ್ ರೈ ಮತ್ತು ಅಶೋಕ್ ಪಕಳ ಕಾರ್ಯಕ್ರಮ ನಿರ್ವಹಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles