ಮ೦ಗಳೂರು: ಮಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಬಿ. ಎಲ್. ಸಂತೋಷ್ ಅವರು ನವೀಕರಣಗೊಂಡ ಬಿಜೆಪಿ ಕಛೇರಿಗೆ ತಮ್ಮ ಮೊದಲ ಭೇಟಿ ನೀಡಿದರು. ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ. ಕಾರ್ಯಕರ್ತರೊಂದಿಗೆ ಉಭಯ ಕುಶಲೋಪರಿ ವಿಚಾರಿಸಿದರು. ಹಾಗೂ ಕಾರ್ಯಾಲಯ ಮತ್ತು ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ,ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾಗ ಕಿಶೋರ್ ಕುಮಾರ್ ಪುತ್ತೂರು, ಮೇಯರ್ ಮನೋಜ್ ಕುಮಾರ್,
ಪ್ರಮುಖರಾದ ಉದಯ ಕುಮಾರ್ ಶೆಟ್ಟಿ, ರಾಜೇಶ್ ಕಾವೇರಿ , ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವರ್ ,ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.