ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರೀಷಿಯನ್, ಮೆಷಿನಿಷ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೋಗ್ರಾಮಿಂಗ್ & ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಎಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ 11 ಕೊನೆಯ ದಿನ.
ಅರ್ಜಿಗಳನ್ನು ನಗರದ ಬಿಜೈನಲ್ಲಿರುವ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಗೆ ಸಲ್ಲಿಸಬೇಕು. ಜನವರಿ 16ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.