20.7 C
Karnataka
Thursday, January 9, 2025

ಹಾಲು ಉತ್ಪಾದಕರ ಪ್ರೋತ್ಸಾಹ ಧನ 1.50 ರೂ.ಗೆ ಹೆಚ್ಚಳ“: ಸುಚರಿತ ಶೆಟ್ಟಿ

ಮಂಗಳೂರು: ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಮೇವಿನ ಕೊರತೆ, ವಾತಾವರಣದ ಅಧಿಕ ಉಷ್ಣತೆ, ಪಶು ಆಹಾರದ ಕೊರತೆ ಮತ್ತು ಕೂಲಿ ಕಾರ್ಮಿಕರ ತೀವ್ರ ಅಭಾವದಿಂದ ಹೈನುಗಾರಿಕೆಯು ಕಷ್ಟ ಸಾಧ್ಯವಾಗಿದ್ದು, ಸಂಘಗಳ ಮುಖಾಂತರ ಹಾಲು ಶೇಖರಣೆಯು ಅಪೇಕ್ಷಿಸಿದಷ್ಟು ಅಭಿವೃದ್ಧಿಯಾಗದೆ ಇರುತ್ತದೆ. ಇದರಿಂದಾಗಿ ಸಂಘಗಳಲ್ಲಿ ಹಾಲು ಶೇಖರಣೆ ಕಡಿಮೆಯಾಗಿ ಸಂಘಗಳ ಲಾಭಾಂಶ
ಕಡಿಮೆಯಾಗುತ್ತಿದೆ. ಇದನ್ನು ಮನಗಂಡು ವಿಶೇಷ ಪ್ರೋತ್ಸಾಹಧನವನ್ನು 1.1.2025 ರಿಂದ ರೂ.1 ರಿಂದ ರೂ.1.50ಗೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ 4.5 ಫ್ಯಾಟ್ ನಿಂದ 8.5 ಎಸ್ ಎನ್ ಎಫ್ ಗೆ ರೈತರಿಗೆ ನೀಡುವ ದರವನ್ನು 36.74ರಿಂದ 36.95ಕ್ಕೆ ಏರಿಸಲಾಗಿದೆ ಎ೦ದು ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನೊಳಗೊಂಡಿರುತ್ತದೆ. ಪ್ರಸ್ತುತ 749 ಸಂಘಗಳು ಕಾರ್ಯಾಚರಿಸುತ್ತಿದ್ದು, 51138 ಸಕ್ರಿಯ ಸದಸ್ಯರಿಂದ ದಿನವಹಿ 3,40,158 ಲೀ. ಹಾಲು ಸಂಗ್ರಹಣೆಯಾಗುತ್ತಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ಉಭಯ ಜಿಲ್ಲೆಯಲ್ಲಿ ಪ್ರಸ್ತುತ 16 ಪಶು ವೈದ್ಯಕೀಯ ಶಿಬಿರ ಕಛೇರಿಗಳು ಕಾರ್ಯಾಚರಣೆಯಲ್ಲಿದ್ದು, ತಜ್ಞ ಪಶುವೈದ್ಯರು ವಿಶೇಷಸಲಹಾ ಸೂಚನೆಗಳನ್ನು ನೀಡುತ್ತಿದ್ದಾರೆ.
ಒಕ್ಕೂಟದ ವ್ಯಾಪ್ತಿಯಲ್ಲಿ 2024-25 ನೇ ಸಾಲಿನಲ್ಲಿ ದಿನವಹಿ ಸರಾಸರಿ 4.01 ಲಕ್ಷ ಲೀ. ಹಾಲು, 78000 ಕೆ.ಜಿ ಮೊಸರು, ಮಾಸಿಕ 75 ಟನ್ ಪನೀರ್, ತುಪ್ಪ 153 ಟನ್, 1 ಟನ್ ಒಕ್ಕೂಟದ ಸಿಹಿ ಉತ್ಪನ್ನ ಮತ್ತು ಸುವಾಸಿತ ಹಾಲು, 2 ಟನ್ ಕಹಾಮ ಸಿಹಿ ಉತ್ಪನ್ನ ಒಕ್ಕೂಟದಲ್ಲಿ ಮಾರಾಟವಾಗುತ್ತಿದೆ“ ಎಂದವರು ಮಾಹಿತಿ ನೀಡಿದರು.
ಡಿಸೆಂಬರ್ ಮಾಹೆಯ ಅಂತ್ಯದವರೆಗೆ ಅಂದಾಜು 870 ಕೋಟಿಯಷ್ಟು ವ್ಯವಹಾರ ಮಾಡಿ, 7.76 ಕೋಟಿ ಲಾಭ ಗಳಿಸುವನಿರೀಕ್ಷೆಯಿರುತ್ತದೆ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಹಾಲು ಒಕ್ಕೂಟದ ಎಂ.ಡಿ.ವಿವೇಕ್ ಡಿ., ಒಕ್ಕೂಟದ ಉಪಾಧ್ಯಕ್ಷ ಜಯರಾಮ್ ರೈ ,ನಿರ್ದೇಶಕರಾದ ,ದಿವಾಕರ್ ಶೆಟ್ಟಿ ಕಾಪು,,ದಿವಾಕರ್ ಶೆಟ್ಟಿ ಕಾಪು, ನಾರಾಯಣ ಪ್ರಕಾಶ್, ಮಹಿಳಾ ಪ್ರತಿನಿಧಿ ಸವಿತಾ ಶೆಟ್ಟಿ, ಸದಾಶಿವ ಶೆಟ್ಟಿ, ನರಸಿಂಹ ಕಾಮತ್, ಸುಧಾಕರ್ ರೈ, ಮಾಜಿ ಅಧ್ಯಕ್ಷ ರವಿರಾಜ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles