ಮ೦ಗಳೂರು: ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್ – ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ
15 ರಂದು ವಿಜೃಂಭಣೆಯಿಂದ ಆಚರಿಸಲಾಗುವುದು ಎ೦ದು ಬಾಲಯೇಸುವಿನ ಪುಣ್ಯಕ್ಷೇತ್ರದ ಗುರುಮಠದ ಮುಖ್ಯಸ್ಥರಾದ ಫಾ. ಮೆಲ್ವಿನ್ ಡಿಕುನ್ಹಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜನವರಿ 14ರಂದು ಸಂಜೆ 6 ಘಂಟೆಗೆ ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು ಝಾನ್ಸಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ವಿಲ್ಫ್ರೇಡ್ ಗ್ರೆಗೋರಿ ಮೊರಾಸ್,
ಆರ್ಪಿಸುವರು. ಅದೇ ದಿನ ಬೆಳಿಗ್ಗೆ 10.30 ಘಂಟೆಗೆ ವಿಶೇಷ ಪ್ರಾರ್ಥನಾವಿಧಿಯನ್ನು .ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಅಲೋಶಿಯಸ್ ಪಾಲ್ ಡಿಸೋಜಾ, ನೆರವೇರಿಸುವರು. ಇದು ಮಕ್ಕಳಿಗಾಗಿಅರ್ಪಿಸಲಾಗುವ ವಿಶೇಷ ಪ್ರಾರ್ಥನಾವಿಧಿ. ಜನವರಿ 15ರಂದು ಬೆಳಿಗ್ಗೆ 10.30 ಘಂಟೆಗೆ ವಿಶೇಷ ಪೂಜಾವಿಧಿಯನ್ನು ಪಶ್ಚಿಮ ಬಂಗಾಳದ ಅಸನ್‌ಸೋಲ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಎಲಿಯಾಸ್ ಫ್ರ್ಯಾಂಕ್ ಅರ್ಪಿಸಲಿರುವರು. ಇದು ವ್ಯಾದಿಷ್ಟರಿಗಾಗಿಅರ್ಪಿಸಲಾಗುವ ವಿಶೇಷ ಪೂಜಾವಿಧಿಯಾಗಿದೆ ಎ೦ದರು.ಮಹೋತ್ಸವದ ಸಮಾರೋಪ ಪ್ರಾರ್ಥನಾವಿಧಿ ಸಂಜೆ 6 ಘಂಟೆಗೆ ಕಾರ್ಮೆಲ್ ಸಭೆಯ ಅತೀ ವಂದನೀಯ ರುಡೋಲ್ಫ್ ಡಿಸೋಜಾ ಅರ್ಪಿಸಲಿರುವರು.
ಜನವರಿ 14ರಂದು ಜರಗುವ ಇತರ ಬಲಿಪೂಜೆಗಳ ವೇಳಾಪಟ್ಟಿ ಹೀಗಿದೆ:
ಬೆಳಿಗ್ಗೆ 6 (ಕೊಂಕಣಿ), 7.30 (ಇಂಗ್ಲೀಶ್), 9 (ಕೊಂಕಣಿ), 1 (ಕನ್ನಡ). ಅದೇ ದಿನ 10.30 ಘಂಟೆಗೆ ಮಕ್ಕಳಿಗಾಗಿ ವಿಶೇಷ ಬಲಿಪೂಜೆ ಕೊಂಕಣಿಯಲ್ಲಿ ನೆರವೇರುವುದು. ಈ ದಿನದ ಆರಂಭಿಕ ಪೂಜಾವಿಧಿಯನ್ನು ಬೆಳಿಗ್ಗೆ 6 ಘಂಟೆಗೆ ಬಳ್ಳಾರಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತಿ ವಂ. ಡಾ. ಹೆನ್ರಿ ಡಿಸೋಜಾ – ಅವರು ನೆರವೇರಿಸಲಿರುವರು. ವಾರ್ಷಿಕ ಹಬ್ಬದ ಎರಡನೆಯ ದಿನ – ಜನವರಿ 15 ರಂದು ಬೆಳಿಗ್ಗೆ 6.30, 7.30, 9 ಘಂಟೆಗೆ ಕೊಂಕಣಿಯಲ್ಲಿ, 10.30ಗೆ ಮಕ್ಕಳಿಗಾಗಿ ವ್ಯಾದಿಷ್ಟರಿಗಾಗಿವಿಶೇಷ ಪೂಜೆ ಹಾಗೂ 1 ಘಂಟೆಗೆ ಮಲಯಾಳಂ ಭಾಷೆಯಲ್ಲಿ ಪೂಜೆ ನೆರವೇರುವುದು. ಈ ಎರಡು ದಿನದ ವಾರ್ಷಿಕ ಮಹೋತ್ಸವಕ್ಕಾಗಿ ನವದಿನಗಳ ಸಿದ್ಧತೆ -ನವೇನಾ ಪ್ರಾರ್ಥನೆ ಜನವರಿ 5 ರಿಂದ ಜನವರಿ 13 ರ ವರೆಗೆ
ನಡೆಯುವುದು. ಆ ದಿನಗಳಲ್ಲಿ ಪ್ರತಿದಿನ 9 ಪ್ರಾರ್ಥನಾವಿಧಿಗಳು ನಡೆಯುವುದು ಎ೦ದವರು ವಿವರಿಸಿದರು.
ಮಹೋತ್ಸವದ ಹೊರೆಕಾಣಿಕೆಯು ಜನವರಿ 4 ರಂದು ಸಂಜೆ 4.30 ಘಂಟೆಗೆ ಹೋಲಿಕ್ರಾಸ್ ಚರ್ಚ್, ಕುಲಶೇಕರದಿಂದ ಆರಂಭಗೊಳ್ಳುವುದು. ಹೊರೆಕಾಣಿಯ ಅಂತಿಮಭಾಗದಲ್ಲಿ ಸರ್ವಧರ್ಮ ಪ್ರಾರ್ಥನಾಕೂಟ ಹಾಗೂ ಧ್ವಜಾರೋಹಣ ಪುಣ್ಯಕ್ಷೇತ್ರದ ಅಂಗಳದಲ್ಲಿ ನಡೆಯುವುದು.ನವೇನಾ ಹಾಗೂ ಹಬ್ಬದ ದಿನಗಳಲ್ಲಿ (ಜನವರಿ 5 ರಿಂದ 15ರ ವರೆಗೆ) ಮಧ್ಯಾಹ್ನದ ವೇಳೆ ಭಕ್ತಾಧಿಗಳಿಗೆ ಅನ್ನಸಂತರ್ಪಣೆಯು ನಡೆಯುವುದು. ಜನವರಿ 9 ಹಾಗೂ 10 ರಂದುಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1 ಘಂಟೆಯ ವರೆಗೆ ರಕ್ತದಾನ ಹಾಗೂ ಕೇಶದಾನ ಶಿಬಿರವನ್ನು ಏರ್ಪಡಿಸಲಾಗಿದೆ ಎ೦ದವರು
ಬಾಲಯೇಸುವಿನ ಪುಣ್ಯಕ್ಷೇತ್ರದ ನಿರ್ದೇಶಕರಾದ ವಂದನೀಯ ಫಾ. ಸ್ವೀವನ್ ಪಿರೇರಾ ಉಪಸ್ಥಿತರಿದ್ದರು.