18.6 C
Karnataka
Thursday, January 9, 2025

ಕ್ರೀಡಾ ವಸತಿ ನಿಲಯಗಳಿಗೆ ಆಯ್ಕೆ

ಮಂಗಳೂರು: 2025-26ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜ್ಯ/ಜಿಲ್ಲಾ ಕ್ರೀಡಾ ಶಾಲೆ/ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು.

ತಾಲ್ಲೂಕು ಆಯ್ಕೆ ಪ್ರಕ್ರಿಯೆ ನಡೆಯುವ ಸ್ಥಳ ಹಾಗೂ ದಿನಾಂಕ:
ಜನವರಿ 10 ರಂದು ಬೆಳಿಗ್ಗೆ 10 ಗಂಟೆಯಿಂದ ತಾಲ್ಲೂಕು ಕ್ರೀಡಾಂಗಣ (ಸ್ವರಾಜ್ ಮೈದಾನ), ಮೂಡಬಿದ್ರೆ, ಜನವರಿ 11 ರಂದು ಬೆಳಿಗ್ಗೆ 10 ಗಂಟೆಯಿಂದ ವಿಠಲ ಪ್ರೌಢಶಾಲೆ ಮೈದಾನ, ವಿಟ್ಲ. ಜನವರಿ 13 ರಂದು ಬೆಳಿಗ್ಗೆ 10 ಗಂಟೆಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸುಳ್ಯ, ಜನವರಿ 15 ರಂದು ಬೆಳಿಗ್ಗೆ 10 ಗಂಟೆಯಿಂದ ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜು, ನೂಜಿ ಬಾಳ್ತಿಲ, ಕಡಬ, ಜನವರಿ 18 ರಂದು ಬೆಳಿಗ್ಗೆ 10 ಗಂಟೆಯಿಂದ ತಾಲ್ಲೂಕು ಕ್ರೀಡಾಂಗಣ, ಕೊಂಬೆಟ್ಟು, ಪುತ್ತೂರು, ಜನವರಿ 20ರಂದು ಬೆಳಿಗ್ಗೆ 10 ಗಂಟೆಯಿಂದ ಮಂಗಳೂರು ವಿಶ್ವವಿದ್ಯಾಲಯ ಮೈದಾನ, ಕೊಣಾಜೆ, ಜನವರಿ 21 ರಂದು ಬೆಳಿಗ್ಗೆ 10 ಗಂಟೆ ಯಿಂದ ಸರ್ಕಾರಿ ಪ್ರೌಢಶಾಲೆ, ಪುಂಜಾಲಕಟ್ಟೆ, ಬೆಳ್ತಂಗಡಿ. ಹಾಗೂ ಜನವರಿ 22ರಂದು ಬೆಳಿಗ್ಗೆ 10 ಗಂಟೆಯಿಂದ ಸೈಂಟ್ ಅಲೋಶಿಯಸ್ ಸ್ಕೂಲ್ ಉರ್ವ, ಮಂಗಳೂರು.

ಕಿರಿಯರ ವಿಭಾಗ:– ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ಬಯಸುವ ಕ್ರೀಡಾಪಟುಗಳು ಪ್ರಸ್ತುತ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 2025-26ನೇ ಸಾಲಿಗೆ 5ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯಬೇಕು ಹಾಗೂ 2025ನೇ ಜೂನ್ 01 ರಂದು 11 ವರ್ಷ ಒಳಗಿನವರಾಗಿರಬೇಕು. ಪ್ರಸ್ತುತ ವರ್ಷ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 2025-26ನೇ ಸಾಲಿಗೆ 8ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯಬೇಕು ತಾಲೂಕು ಮಟ್ಟದಲ್ಲಿ ಅರ್ಹತೆ ಪಡೆದು ರಾಜ್ಯ ಮಟ್ಟದ ಕ್ರೀಡಾ ಶಾಲೆ/ನಿಲಯಕ್ಕೆ ಆಯ್ಕೆ ಬಯಸುವವರು. ಫೆ 10 ರಂದು ಉಡುಪಿಯಲ್ಲಿ ನಡೆಯುವ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು.

ಹಿರಿಯರ ವಿಭಾಗ: ಹಿರಿಯ ವಿಭಾಗದ ಕ್ರೀಡಾ ಶಾಲೆ/ ವಸತಿ ನಿಲಯಗಳಿಗೆ ಆಯ್ಕೆ ಬಯಸುವ ಕ್ರೀಡಾಪಟುಗಳು ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 2025-26ನೇ ಸಾಲಿಗೆ ಪ್ರಥಮ ಪಿ.ಯು.ಸಿ. ಗೆ ಪ್ರವೇಶ ಪಡೆಯಲು ಅರ್ಹತೆ ಪಡೆದು, 2025ನೇ ಜೂನ್ 1 ರಂದು 18 ವರ್ಷ ಒಳಗಿನವರಾಗಿರಬೇಕು. ಹಿರಿಯ ವಿಭಾಗಕ್ಕೆ ಆಯ್ಕೆ ಬಯಸುವ ಕ್ರೀಡಾಪಟುಗಳು ದಿನಾಂಕ ಫೆ. 11 ರಂದು ಉಡುಪಿಯಲ್ಲಿ ನಡೆಯುವ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ನೇರವಾಗಿ ಭಾಗವಹಿಸಬೇಕು.

ಜಿಲ್ಲಾ ಮತ್ತು ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಸಂಬಂಧಪಟ್ಟ ತಾಲೂಕುಗಳಲ್ಲಿ ಭಾಗವಹಿಸಬೇಕು. ಸಂಬಂಧಪಟ್ಟ ತಾಲೂಕಿನಲ್ಲಿ ಭಾಗವಹಿಸಲು ಸಾಧ್ಯವಾಗದೇ ಇದ್ದಲ್ಲಿ ಜಿಲ್ಲೆಯ ಇತರೆ ತಾಲೂಕಿನಲ್ಲಿ ನಡೆಯುವ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಭಾಗವಹಿಸುವ ವಿದ್ಯಾರ್ಥಿಗಳು ದೃಢೀಕೃತ ಜನನ ಪ್ರಮಾಣ ಪತ್ರವನ್ನು ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ  ಮೊಬೈಲ್ ಸಂಖ್ಯೆ  7019144302, 9008848289 ಹಾಗೂ 0824- 2451264 ರನ್ನು ಸಂಪರ್ಕಿಸಬಹುದು ಎಂದು ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 sports hostels: selection 

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles