ಮಂಗಳೂರು: ಕರಾವಳಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ನಗರದಲ್ಲಿ ಜ. 11 ಮತ್ತು 12 ರಂದು ನಡೆಯಲಿರುವ ಕಲಾ ಪರ್ಬ ಕಾರ್ಯಕ್ರಮದಂದು ಕದ್ರಿ ಪಾರ್ಕ್ ರಸ್ತೆಯಲ್ಲಿ ಅಂದು ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಿಲಾಗಿದೆ.
ಈ ಆದೇಶ ಪೋಲೀಸ್ ವಾಹನಗಳು ಹಾಗೂ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಪೋಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.