ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 11 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಜ.11ರಂದು ಶನಿವಾರ ಸಂಜೆ 5 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಮಂಜನಾಡಿ ತಲುಪಿ 6:15 ಕ್ಕೆ ಉಳ್ಳಾಲ ತಾಲೂಕಿನ ನರಿಂಗಾನ ಕಂಬಳ ಸಮಿತಿ ವತಿಯಿಂದ ಆಯೋಜಿಸಿರುವ ತೃತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ “ ನರಿಂಗಾನ ಕಂಬಳೋತ್ಸವ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ರಾತ್ರಿ 8 ಗಂಟೆಗೆ ಮಂಜನಾಡಿ ಆಗಮನ. 9:40ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು.