ಮಂಗಳೂರು : ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಜನವರಿ 10 ರಂದು ಸಹಾಯಕ ಆಯುಕ್ತರ ಕಚೇರಿ ಸಭಾಂಗಣ ಮಂಗಳೂರು ಮಿನಿ ವಿಧಾನಸೌಧದಲ್ಲಿ ನಡೆಯಿತು.
ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್ ಕುಮಾರ್ ಮಾತನಾಡಿ ದಡಾರ ರುಬೆಲ್ಲಾ ನಿರ್ಮೂಲನೆ ಮಾಡಲು ಎಮ್.ಆರ್ ಪ್ರಕರಣಗಳು ಶೂನ್ಯ ವಾಗಬೇಕು . ರುಬೆಲ್ಲಾ ವೈರಸ್‍ನಿಂದ ಉಂಟಾಗುವ ಸಾಂಕ್ರಾಮಿಕ ಸೋಂಕು. ಇದರಿಂದ ಜ್ವರ ಗುಳ್ಳೆ ಗಂಟಲು ಒಣಗುವಿಕೆ ಮತ್ತು ಗ್ರಂಥಿಗಳ ಓದುವಿಕೆ ಅಲ್ಲದೆ ಗರ್ಭಾವಸ್ಥೆಯ ಮೊದಲ ತ್ರೈಮಾಸಿಕದಲ್ಲಿ ರುಬೆಲ್ಲಾ ಬಂದರೆ ಜೀವನಪಯರ್ಂತ ಮಗುವಿಗೆ ದೃಷ್ಟಿ ಮತ್ತು ಬುದ್ಧಿಮಾಂದ್ಯತೆ ಸೇರಿದಂತೆ ಗಂಭೀರವಾದಂತ ಸಮಸ್ಯೆಗಳು ಎದುರಾಗಬಹುದು. ಈ ರೀತಿಯ ಪ್ರಕರಣಗಳು ಕಂಡುಬಂದಲ್ಲಿ ಪರೀಕ್ಷೆ ಮಾಡುವುದು ಅಗತ್ಯ. ಮಕ್ಕಳಿಗೆ ಎಂ.ಆರ್ ಲಸಿಕೆಗಳನ್ನು ಹಾಕಿಸಬೇಕು.0-5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲು ಕ್ರಮವಹಿಸಬೇಕು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲು ಕ್ರಮವಹಿಸಬೇಕು. ಬಾಲವಿಕಾಸ ಸಮಿತಿ ಸಭೆಯನ್ನು ಆಯೋಜಿಸಿ ಕಾರ್ಯಕ್ರಮದ ಮಹತ್ವವನ್ನು ತಿಳಿಸಬೇಕು. ತಾಯಂದಿರ ಸಭೆಗಳಲ್ಲಿ ಲಸಿಕಾ ದಿನಾಂಕದ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ , ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಮ್ಮ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳು ಅನಾಥಾಶ್ರಮಗಳು ಹಾಗೂ ವಿದ್ಯಾರ್ಥಿ ನಿಲಯದ ಮುಖ್ಯಸ್ಥರುಗಳಿಗೆ ಎಲ್ಲಾ ಮಕ್ಕಳಿಗೆ ಲಸಿಕೆ ನೀಡುವಂತೆ ಕ್ರಮವಹಿಸಲು ತಾಲೂಕು ಆರೋಗ್ಯಧಿಕಾರಿಗಳು ತಿಳಿಸಿದರು.
ಕಾರ್ಮಿಕ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳು, ಗಣಿಗಾರಿಕೆ ಕಾರ್ಮಿಕರ ಮಕ್ಕಳು ಜಲ್ಲಿ ಒಡೆಯುವ ಕಾರ್ಮಿಕರ ಮಕ್ಕಳು ಹಾಗೂ ಇತರೆ ವಲಸೆ ಪ್ರದೇಶಗಳಲ್ಲಿ 0-5 ವರ್ಷದ ಮಕ್ಕಳನ್ನು ಗುರುತಿಸಿ ಅಭಿಯಾನದ ಬಗ್ಗೆ ಅವರಿಗೆ ಮಾಹಿತಿ ನೀಡಬೇಕು ಎಂದರು.
ಲಸಿಕಾ ಕಾರ್ಯಕ್ರಮದಲ್ಲಿ ದಡಾರ ರುಬೆಲ್ಲಾ ನಿರ್ಮೂಲನೆ ಬಗ್ಗೆ ತಾಲೂಕು ಮಟ್ಟದ ಲಸಿಕಾ ಕಾರ್ಯಪಡೆಯ ಚಾಲನಾ ಸಮಿತಿ ಸಭೆ, 100 ದಿನಗಳ ಟಿ.ಬಿ ಕಾರ್ಯಕ್ರಮದ ಬಗ್ಗೆ ಸಮಿತಿ ಸಭೆ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ, ಆರ್. ಬಿ. ಎಸ್. ಕೆ. ಸಮನ್ವಯ ಸಮಿತಿ ಸಭೆ, ಆಶಾ ಕುಂದು ಕೊರತೆಗಳ ಸಮಿತಿ ಸಭೆಯನ್ನು ನಡೆಸಲಾಯಿತು.