ಮಂಗಳೂರು: ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮ, ಭಾಷೆಯ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರ ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ ಕರಾವಳಿ ಜಿಲ್ಲೆಗಳ ಸಂಸ್ಕೃತಿಯಾಗಿದೆ. ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ ಎ೦ದರು.
ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ಸರ್ಕಾರ ಶ್ರಮಿಸಿತು. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ.24 ಕಂಬಳಗಳನ್ನು ನಡೆಸಲು ಪ್ರತೀ ಕಂಬಳಕ್ಕೆ ತಲಾ 5 ಲಕ್ಷ ರೂಪಾಯಿ ನೆರವನ್ನು ನಮ್ಮ ಸರ್ಕರ ನೀಡಿದೆ ಎಂದರು.
ತಮ್ಮ ಮನೆ ಮಕ್ಕಳಂತೆ ಕೋಣಗಳನ್ನು ಸಾಕುತ್ತಾರೆ. ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ ಎಂದರು.
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಬೇಡಿಕೆಯಂತೆ ತುಳು ಭಾಷೆಯನ್ನು ಎರಡನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು ಎಂದವರು ಹೇಳಿದರು.
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಪ್ರಸ್ತಾವನೆಗೈದು ಕ್ಷೇತ್ರದ ಅಭಿವೃದ್ಧಿಗೆ 1000 ಕೋಟಿಯಷ್ಟು ಅನುದಾನವನ್ನುಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎ೦ದರು. , ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ರಹೀಂ ಖಾನ್ ಸೇರಿ ಹಲವು ಪ್ರಮುಖರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Naringana Lava-Kusa Jodukere Kambala
.