29.3 C
Karnataka
Wednesday, January 22, 2025

ರಾಷ್ಟ್ರೀಯ ಯುವ ದಿನಾಚರಣೆ

ಮಂಗಳೂರು : ಮಾನವೀಯ ಸೇವೆಯಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಯುವ ಜನತೆ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸ್ವಾಮಿ ವಿವೇಕಾನಂದರ ಸಂದೇಶ ಸ್ಪೂರ್ತಿಯಾಗಿದೆ ಎಂದು ಶಾಸಕ ಡಿ,.ವೇದವ್ಯಾಸ ಕಾಮತ್ ಹೇಳಿದರು.
ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ಯೂತ್ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಮತ್ತು ಯೇನೆಪೊಯ ಪರಿಗಣಿತ ವಿ.ವಿ. ವತಿಯಿಂದ ನಗರದ ವಿ.ವಿ. ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಭಾನುವಾರ ನಡೆದ ಸ್ವಾಮಿ ವಿವೇಕಾನಂದರ ೧೬೩ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ -೨೫ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಸೇವೆಗೆ ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಪ್ರತಿಯೊಬ್ಬರು ರಕ್ತದಾನ ಮಾಡುವ ಸಂಕಲ್ಪ ತಳೆದು ರೆಡ್‌ಕ್ರಾಸ್ ಸಂಸ್ಥೆಯ ಮಾನವೀಯ ಕಾರ್ಯಗಳಿಗೆ ನೆರವಾಗಬೇಕು ಎಂದು ಶಾಸಕ ಕಾಮತ್ ಹೇಳಿದರು.
ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿ.ವಿ.ಯ ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ, ಯೇನೆಪೊಯ ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ.ಲಕ್ಷ್ಮೀಕಾಂತ ಛಾತ್ರ, ಮಂಗಳೂರು ವಿ.ವಿ. ಕಾಲೇಜು ಪ್ರಾಂಶುಪಾಲ ಡಾ.ಗಣಪತಿ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರೆಡ್‌ಕ್ರಾಸ್ ಜಿಲ್ಲಾ ಖಜಾಂಜಿ ಮೋಹನ್ ಶೆಟ್ಟಿ, ನಿರ್ದೇಶಕರಾದ ಗುರುದತ್ ಕಾಮತ್, ಡಾ.ಸುಮನಾ ಬೋಳಾರ್, ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು. ಮಂಗಳೂರು ವಿ.ವಿ.ಮಟ್ಟದ ಯೂತ್ ರೆಡ್‌ಕ್ರಾಸ್ ಪ್ರಶಸ್ತಿಗಳನ್ನು ವಿತರಿಸಲಾಯಿತು.
ಮಂಗಳೂರು ವಿ.ವಿ.ಯುವ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಅಮೀನ್ ಪ್ರಶಸ್ತಿ ವಿಜೇತರ ವಿವರ ನೀಡಿದರು.
ರೆಡ್‌ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಸ್ವಾಗತಿಸಿ, ಯುವ ರೆಡ್‌ಕ್ರಾಸ್ ನಿರ್ದೇಶಕ ಸಚೇತ್ ಸುವರ್ಣ ವಂದಿಸಿದರು. ಪಾದುವ ಕಾಲೇಜಿನ ವಿದ್ಯಾರ್ಥಿನಿ ಜೆನಿಷಾ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles