ಮಂಗಳೂರು: ತುಳು ಚಲನ ಚಿತ್ರಗಳಿಗೆ ಸಬ್ಸಿಡಿ, ಪ್ರಾದೇಶಿಕ ಭಾಷಾ ಸಿನಿಮಾಗಳಿಗೆ ಪ್ರಶಸ್ತಿ, ಮಲ್ಟಿಫ್ಲೆಕ್ಸ್ ಗಳಲ್ಲಿ ಕನ್ನಡ ಸಿನಿಮಾಗಳಿಗೆ ನೀಡುವಂತೆ ಶೇಕಡಾವಾರು ಷೇರು, ತುಳುಚಲನಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಾಗ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ನಿಯೋಗದಲ್ಲಿ ಸಂಘದ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೊಂಚಾಡಿ, ಸಚಿನ್ ಎ ಎಸ್, ಪ್ರೀತಂ ಸಾಗರ್ ಉಪಸ್ಥಿತರಿದ್ದರು.