ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆಬ್ರವರಿ 15 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 3 ಗಂಟೆಗೆ ಮಂಗಳಾದೇವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಕೈಗೊಳ್ಳಲಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ, ಪಶು ವೈದ್ಯಕೀಯ ಆಸ್ಪತ್ರೆ ಕಟ್ಟಡ, ಕಾಪೊ೯ರೇಷನ್ ಕ್ವಾಟರ್ಸ್ ಮತ್ತು ಬಸ್‍ಬೇಗಳ ಹಾಗೂ ಇನ್ನಿತರೆ ಕಾಮಗಾರಿಗಳ ಉದ್ಘಾಟನೆ.
ಸಂಜೆ 4 ಗಂಟೆಗೆ ವಾಮಂಜೂರು ತಿರುವೈಲುಗುತ್ತು ಶಂಕು ಪೂಂಜ ದೇವು ಪೂಂಜ ಜೋಡು ಕರೆ ಕಂಬಳ ಟ್ರಸ್ಟ್ ಆಯೋಜನೆಯ ತುಳುನಾಡಿನ ಕಂಬಳ ತಿರುವೈಲೋತ್ಸವ ಕಾರ್ಯಕ್ರಮ. 6.40 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.
ಫೆ. 18: ಲೋಕೋಪಯೋಗಿ ಸಚಿವರ ಪ್ರವಾಸ
ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಫೆಬ್ರವರಿ 18ರಂದು ದ.ಕ ಜಿಲ್ಲೆಗೆ ಆಗಮಿಸಲಿದ್ದಾರೆ.
ಫೆಬ್ರವರಿ 18 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನೆಹರು ವಿಚಾರ ವೇದಿಕೆ ಮಂಗಳೂರು ಇವರ ವತಿಯಿಂದ ಆಯೋಜಿಸಿರುವ “ಗಾಂಧಿ – ಅಂಬೇಡ್ಕರ್- ನೆಹರು” ಸ್ವಾತಂತ್ರ್ಯ ಸಂವಿಧಾನ ದೂರ ದೃಷ್ಟಿ ಎಂಬ ವಿಚಾರಗೋಷ್ಠಿಯಲ್ಲಿ ಭಾಗವಹಿಸುವರು.
ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ, 3 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಲೋಕೋಪಯೋಗಿ ಇಲಾಖೆ ಮಂಗಳೂರು ಜಿಲ್ಲೆಗೆ ಸಂಬಂಧಿಸಿದಂತೆ ಇಲಾಖಾ ಪ್ರಗತಿ ಪರಿಶೀಲನಾ ಸಭೆ, ಸಂಜೆ 6 ಗಂಟೆಗೆ ಸಚಿವರು ಮಂಗಳೂರಿನಿಂದ ನಿರ್ಗಮಿಸಲಿದ್ದಾರೆ.
