ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಅಳಪೆ ಕರ್ಮಾರ್ ಆದರ್ಶ ಮಹಿಳಾ ಮಂಡಲದ ಕಟ್ಟಡದ ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನೆರವೇರಿಸಲಾಯಿತು.
ನಂತರ ಮಾತನಾಡಿದ ಶಾಸಕರು, ಇಲ್ಲಿನ ಆದರ್ಶ ಮಹಿಳಾ ಮಂಡಲದ ಸದಸ್ಯರು ಅತ್ಯಂತ ಕ್ರಿಯಾಶೀಲ ತಂಡವಾಗಿದ್ದು ಉತ್ತಮ ಕಾರ್ಯ ನಿರ್ವಹಿಸುತ್ತಾ ಸಾಗಿರುವುದು ಅಭಿನಂದನಾರ್ಹ. ಈ ಕಟ್ಟಡದ ಮೇಲ್ಛಾವಣಿಯ ಅಗತ್ಯತೆಯ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯೆ ಶೋಭಾ ಪೂಜಾರಿಯವರು ಗಮನಕ್ಕೆ ತಂದ ಬಳಿಕ ಶಾಸಕರ ಅನುದಾನವನ್ನು ಬಳಸಿಕೊಂಡು ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಕಿರಣ್ ರೈ, ನವೀನ್, ಆದರ್ಶ ಮಹಿಳಾ ಮಂಡಲದ ಅಧ್ಯಕ್ಷೆ ಸೀತಾ ಕೆ. ಸಹಿತ ಸರ್ವ ಸದಸ್ಯರು ಉಪಸ್ಥಿತರಿದ್ದರು.
