34.7 C
Karnataka
Sunday, March 9, 2025

ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ: ಸಂಸದ ಬ್ರಿಜೇಶ್‌ ಚೌಟ

ಮಂಗಳೂರು: ದೇಶದ ಪ್ರಜಾಪ್ರಭುತ್ವದ ಸ್ಪರೂಪ ಬದಲಾವಣೆಗೆ ವಿದ್ಯಾರ್ಥಿಗಳ ಕೊಡುಗೆ ಅಪಾರ.ವಿದ್ಯಾರ್ಥಿಗಳ ಶಕ್ತಿಯೇ ನಿಜವಾದ ರಾಷ್ಟ್ರ ಶಕ್ತಿ. ಇದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಿದೆ ಎಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೇಳಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ೨೦೨೪-೨೫ನೇ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು ಒಂದು ಕಾಲದಲ್ಲಿ ವಿದ್ಯಾರ್ಥಿಗಳಾಗಿದ್ದವರೇ ನಾಯಕರಾಗಿ ರಾರಾಜಿಸಿದ ಇತಿಹಾಸವೂ ನಮ್ಮ ಕಣ್ಣ ಮುಂದಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ನಾಯಕತ್ವ ಗುಣ, ವೃತ್ತಿಪರ ಜ್ಞಾನ ಹಾಗೂ ಸಾಮರ್ಥ್ಯವನ್ನು ಬೆಳೆಸಿಕೊಂಡರೆ ಮುಂದಿನ ಜನನಾಯಕರಾಗಿ ಬೆಳೆಯಲು ಸಾಧ್ಯ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಅಜಕ್ಕಳ ಗಿರೀಶ ಭಟ್, ವಿದ್ಯಾರ್ಥಿಗಳು ಯಾರನ್ನು ನಾಯಕರನ್ನಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂಬ ವಿವೇಕವನ್ನು ಹೊಂದಿರಬೇಕು.ನಾಯಕನಿಗೆ ಹಿಂಬಾಲಕರು ಬೆಂಬಲ ನೀಡುವ ವೇಳೆ ಸಾಕಷ್ಟು ಆಲೋಚನೆ ನಡೆಸಿ, ಅವರ ಸಾಮರ್ಥ್ಯ ಮತ್ತು ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸ ಮಾಡಬೇಕಿದೆ ಎ೦ದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್.‌ ಧರ್ಮ,ಬದುಕಿನಲ್ಲಿ ಸವಾಲುಗಳು ಎದುರಾದಾಗ ಕೇವಲ ನಕಾರಾತ್ಮಕವಾಗಿ ಚಿಂತಿಸದೇ ಸಕಾರಾತ್ಮಕವಾಗಿ ಆಲೋಚನೆ ಮಾಡುವ ಮೂಲಕ ಪ್ರಗತಿಯೆಡೆಗೆ ಹೆಜ್ಜೆ ಹಾಕಬೇಕಿದೆ. ಸಮಾನತೆ, ಸಹಬಾಳ್ವೆಯ ಕಡೆಗೆ ಗಮನಹರಿಸಿ ವಿದ್ಯಾರ್ಜನೆವೇಳೆ ಶ್ರದ್ದೆ, ಹಾಗೂ ಶಿಸ್ತುಬದ್ಧವಾಗಿ ಕಲಿಕಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎನ್.‌, ವಿದ್ಯಾರ್ಥಿ ಪರಿಷತ್ತಿನ ಉಪನಿರ್ದೇಶಕ ಪ್ರೊ. ಜಯವಂತನಾಯಕ್‌, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಸಾತ್ವಿಕ್‌, ಕಾರ್ಯದರ್ಶಿ ಕೀರ್ತನ್‌, ಸಹಕಾರ್ಯದರ್ಶಿ ನಂದಿತಾ ಎಸ್.‌,ಲಲಿತಕಲಾ ಸಂಘದ ಕಾರ್ಯದರ್ಶಿ ಪೂಜಾ ಶೆಟ್ಟಿ, ಸಹಕಾರ್ಯದರ್ಶಿ ಅನನ್ಯಾ ಸೇರಿದಂತೆ ಹಳೆ ವಿದ್ಯಾರ್ಥಿ ಪರಿಷತ್ತಿನಪದಾಧಿಕಾರಿಗಳು, ಕಾಲೇಜಿನ ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles