23.9 C
Karnataka
Monday, March 3, 2025

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು:”ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದರು.

ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ಕೇಂದ್ರ ಸರ್ಕಾರ ಸಂಸತ್ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಮುಂದಾಗಿರುವುದನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ. ಇದು ಸರಿಯಲ್ಲ. ಇದರ ವಿರುದ್ಧ ಚುನಾವಣಾ ಆಯೋಗ, ನ್ಯಾಯಾಲಯಗಳ ಮೂಲಕ ನಾವು ಹೋರಾಟ ಮಾಡುತ್ತೇವೆ” ಎಂದು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles