31.2 C
Karnataka
Thursday, March 13, 2025

ಮತ್ಸ್ಯಗಂಧಹೊಸ ಕೋಚ್‌ಗಳಲ್ಲಿ ಲೋಪ: ದೂರು ನಿವಾರಣೆಗೆ ಸಚಿವರಿಗೆ ಸಂಸದ ಕೋಟ ಮನವಿ

ಮ೦ಗಳೂರು: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಕೇಂದ್ರ ರೈಲ್ವೇ ರಾಜ್ಯ ಸಚಿವರನ್ನು ಭೇಟಿಯಾಗಿ ಮತ್ಸ್ಯಗಂಧ ರೈಲಿಗೆ 2024ರಲ್ಲಿ ತಯಾರಾದ ಹೊಸ LHB ಕೋಚ್ ಗಳ ಜೊತೆಗೆ 2020 ರಲ್ಲಿ ತಯಾರಾದ ಹಳೆಯ LHB ಕೋಚ್ ಗಳನ್ನು ಸೇರಿಸುವ ಇಲಾಖೆಯ ಕಾರ್ಯವನ್ನು ಸಚಿವರ ಗಮನಕ್ಕೆ ತಂದಿದ್ದಾರೆ. ಮತ್ಸ್ಯಗಂಧ ರೈಲಿನ ಎಲ್ಲಾ ಟ್ರಿಪ್ ಗಳಿಗೂ ದೂರುಗಳು ಬಾರದಂತೆ ಉತ್ತಮ 2024 ರ ಕೋಚ್ ಗಳನ್ನೇ ಬಳಸುವಂತೆ ಸಂಬಂಧಿಸಿದ ಜೋನಲ್ ರೈಲ್ವೇಗಳಿಗೆ ತಿಳಿಸಲು ಕೋರಿದ್ದು, ಸಚಿವರಿಂದ ಈ ಬಗ್ಗೆ ಸಕಾರತ್ಮಕ ಪ್ರತಿಕ್ರಿಯೆ ಲಭಿಸಿದೆ ಎಂದು‌‌ ಸಂಸದರು ತಿಳಿಸಿದ್ದಾರೆ.

ಕರಾವಳಿ ಹಾಗೂ ಮುಂಬೈ ಬೆಸೆಯುವ ಪ್ರತಿಷ್ಟಿತ ಮತ್ಸ್ಯಗಂಧ ರೈಲು ಇದೀಗ LHB ಕೋಚುಗಳೊಂದಿಗೆ ಕಳೆದ ಪೆಬ್ರವರಿ 17 ರಿಂದ ಮೇಲ್ದರ್ಜೆಗೇರಿದ್ದು ಪ್ರಯಾಣಿಕರಿಗೆ ಸುರಕ್ಷಿತ ಪ್ರಯಾಣದ ಭರವಸೆ ನೀಡಿದೆ.

ಆದರೆ ಮತ್ಸ್ಯಗಂಧ ರೈಲಿನ ಎರಡೂ ರೇಕುಗಳ ಜತೆ ಮಂಗಳೂರು ಮತ್ತು ಕೇರಳದ ತಿರುವನಂತಪುರಂ ನಡುವೆ ಓಡುವ ಇನ್ನೊಂದು ರೈಲಿನ ರೇಕುಗಳ ಹೊಂದಾಣಿಕೆ ವ್ಯವಸ್ತೆ ಇದ್ದು, ಈ ರೈಲಿನ ಎರಡು ರೇಕೂಗಳೂ ಸೇರಿ 2024 ರ ಎರಡು ಹೊಸ ರೇಕುಗಳ ಜತೆ ಮತ್ತೆರಡು 2020 ರ ಹಳೇ ರೇಕುಗಳೂ ಸೇರಿಕೊಂಡ ಕಾರಣ, ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲಿನ ಕೆಲವು ಟ್ರಿಪ್ ಗಳಲ್ಲಿ ಹಳೆಯ LHB ರೇಕುಗಳು ಸೇರುವುದು ಗಮನಕ್ಕೆ ಬಂದಿದ್ದು; ಈ ಹಿನ್ನೆಲೆಯಲ್ಲಿ ಬೇರೆ ಬೇರೆ ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಕೋಚುಗಳ ಸಮಸ್ಯೆಗಳ ಬಗ್ಗೆ ಬಂದ ದೂರುಗಳು ಸಂಸದರಿಗೆ ತಲುಪಿತ್ತು. ಈಗಾಗಲೇ ಅಧಿಕಾರಿಗಳಿಗೆ ಸಮಸ್ಯೆ ಪರಿಹಾರಕ್ಕೆ ತಿಳಿಸಿದ್ದು ಜತೆಗೆ ಈ ಬಗ್ಗೆ ಸಮಸ್ಯೆ ಪರಿಹಾರಕ್ಕೆ ಸಂಸದರು ಸಚಿವರನ್ನು ಭೇಟಿಯಾಗಿದ್ದರು.

ಮಂಗಳೂರು ಮುಂಬಯಿ ನಡುವೆ ಓಡುವ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲಿಗೆ ಉತ್ತಮ ಕೋಚುಗಳನ್ನಷ್ಟೇ ಜೋಡಿಸಲು ತಿಳಿಸಿದ್ದು , ಹಳೆಯ ಕೋಚುಗಳನ್ನು ಅಳವಡಿಸುವ ಪದ್ದತಿಗೆ ಮತ್ತು ಹೊಸ ಹಾಗು ಹಳೇ ಕೋಚುಗಳ ಮಿಶ್ರಣ ಮಾಡಿ ಓಡಿಸುವ ಪದ್ದತಿಯನ್ನು ಅನುಸರಿಸದಂತೆ ಸಚಿವರಿಗೆ ಸಂಸದರು ಮನವಿ ಮಾಡಿದ್ದು , ಸಚಿವರು ಈ ಬಗ್ಗೆ ಮತ್ಸ್ಯಗಂಧ ರೈಲಿನ ಮೂಲ ವಲಯವಾದ ದಕ್ಷಿಣ ರೈಲ್ವೇಗೆ ತಕ್ಷಣವೇ ಸಮಸ್ಯೆ ಪರಿಹರಿಸಲು ಸೂಚನೆ ನೀಡಿರುತ್ತಾರೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles