ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ
ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು.
ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ 2ನೇ ವಾರ್ಷಿಕೋತ್ಸವ ಪ್ರಯುಕ್ತ ರಾಜ್ಯದಲ್ಲಿ ಬೃಹತ್ ಸಮಾವೇಶ ಆಯೋಜಿಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉದ್ದೇಶಿಸಿದ್ದು, ಮುಂದಿನದಿನಗಳಲ್ಲಿ ಸಮಾವೇಶ ಎಲ್ಲಿ ಮತ್ತು ಹೇಗೆ ಎಂಬುದರ ಬಗ್ಗೆ ನಿರ್ಧಾರವಾಗಲಿದೆ. ಇದರಲ್ಲಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು-ಸದಸ್ಯರು, ಬ್ಲಾಕ್ ಪದಾಧಿಕಾರಿಗಳು-ಸದಸ್ಯರು ಹಾಗೂ ಸರ್ಕಾರದ ನಾಮನಿರ್ದೇಶಿತ ಸದಸ್ಯರು ಕಡ್ಡಾಯವಾಗಿ ಭಾಗವಹಿವುದುಮತ್ತು ಇದಕ್ಕಾಗಿ ಪ್ರತಿ ಬ್ಲಾಕ್ ನಿಂದ ಕಾರ್ಯಕರ್ತರನ್ನು ಒಗ್ಗೂಡಿಸಲು ಶ್ರಮಿಸಬೇಕು ಎಂದು ಸೂಚಿಸಿದರು. ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಸಮಾವೇಶ ಹಮ್ಮಿಕೊಳ್ಳಲು ಈಗಾಗಲೇನಿರ್ಣಯಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಎ.11ರಂದು ಬೆಳಿಗ್ಗೆ10:30ಕ್ಕೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ವಿವಿಧ ಮುಖಂಡರ ಸಭೆ ಕರೆದಿದ್ದಾರೆ. ಬಳಿಕ ಅವರು ಅಂದು ಸಂಜೆ 4ಕ್ಕೆಉಳ್ಳಾಲದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಎ.12 ರಂದು ಬೆಳಿಗ್ಗೆ 10:30ಕ್ಕೆ ಬಂಟ್ವಾಳ ಕ್ಷೇತ್ರ, ಮಧ್ಯಾಹ್ನ2ಕ್ಕೆ ಪುತ್ತೂರು ಕ್ಷೇತ್ರ, ಸಂಜೆ 5ಕ್ಕೆ ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು,ಸಚಿವರು ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ ಪಕ್ಷದ ಮುಖಂಡರು, ನಾಮನಿರ್ದೇಶಿತ ಅಧ್ಯಕ್ಷರು-ಸದಸ್ಯರು, ಜಿ.ಪಂ.-ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾ.ಪಂ. ಸದಸ್ಯರು, ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕು
ಎಂದು ಕರೆ ನೀಡಿದರು.
ಇತ್ತೀಚಿಗೆ ಅಗಲಿದ ಮಾಜಿ ಸಚಿವ ಸುಬ್ಬಯ್ಯ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನೋಣಯ್ಯ ಪೂಜಾರಿ, ಮಾಜಿ ಉಪಮೇಯರ್ ಮೊಹಮ್ಮದ್ ಕುಂಜತ್ತಬೈಲ್, ಮುನ್ನೂರು ಗ್ರಾಮ ಪಂಚಾಯತ್ಸದಸ್ಯ ಅಬ್ದುಲ್ ಅಝೀಝ್, ಕೊಳ್ತಿಗೆ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಅರ್ಜುನನ್ ಅವರಿಗೆ ಸಂತಾಪ ಸೂಚಿಸಲಾಯಿತು.
ಸಭೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೊ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ
ಪದ್ಮರಾಜ್.ಆರ್ ಮಾತನಾಡಿ ಸಲಹೆ ಸೂಚನೆ ನೀಡಿದರು. ಮಂಗಳೂರು ತಾಲೂಕು ಗ್ಯಾರಂಟಿ ಯೋಜನಾ ಪ್ರಾಧಿಕಾರದ
ಅಧ್ಯಕ್ಷ ಸುರೇಂದ್ರ ಕಂಬಳಿ, ಬ್ಲಾಕ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ನಾಗೇಶ್ ಗೌಡ, ಮೋಹನ್ ಕೋಟ್ಯಾನ್,
ಪುರುಷೋತ್ತಮ ಚಿತ್ರಾಪುರ, ಪ್ರಕಾಶ್ ಸಾಲ್ಯಾನ್, ರಮೇಶ್ ಶೆಟ್ಟಿ ಬೋಳಿಯಾರ್, ಬಾಲಕೃಷ್ಣ ಅಂಚನ್, ಚಂದ್ರಶೇಖರ್
ಭಂಡಾರಿ, ಕೃಷ್ಣ ಪ್ರಸಾದ್ ಆಳ್ವ, ಪದ್ಮನಾಭ ಪೂಜಾರಿ, ಪಿ.ಸಿ.ಜಯರಾಂ, ಪಿ.ಕೆ.ಅಭಿಲಾಷ್, ಜಿಲ್ಲಾ ಕಾಂಗ್ರೆಸ್ ಮುಂಚೂಣಿ
ಘಟಕಾಧ್ಯಕ್ಷರಾದ ಶಾಲೆಟ್ ಪಿಂಟೋ, ಜೋಕಿಂ ಡಿಸೋಜ, ವಿಶ್ವಾಸ್ ಕುಮಾರ್ ದಾಸ್, ಶುಭಾಶ್ಚಚಂದ್ರ ಶೆಟ್ಟಿ ಕೊಲ್ನಾಡ್,
ನಾರಾಯಣ್ ನಾಯ್ಕ್, ಸುದರ್ಶನ್ ಜೈನ್, ಡಾ.ಶೇಖರ್ ಪೂಜಾರಿ, ಡಿಸಿಸಿ ಪದಾಧಿಕಾರಿಗಳು, ಕೆಪಿಸಿಸಿ ಸದಸ್ಯರು
ಉಪಸ್ಥಿತರಿದ್ದರು.
