27.8 C
Karnataka
Sunday, April 20, 2025

ಜಾತಿಗಣತಿ ವಿಚಾರದಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲಾಗುವುದು: ಡಿಸಿಎಂ ಡಿ ಕೆ ಶಿವಕುಮಾರ್

ಮಂಗಳೂರು: “ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು, ಈ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ಇರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಜಾತಿಗಣತಿ ಗೆ ಕೆಲವು ಸಮುದಾಯಗಳ ವಿರೋಧ ವ್ಯಕ್ತವಾಗುತ್ತಿದ್ದು, ರಾಹುಲ್ ಗಾಂಧಿ ಅವರ ಪತ್ರದಲ್ಲಿ ಬೇಗ ವರದಿ ಜಾರಿ ಮಾಡಿ ಎಂದು ಹೇಳಲಾಗಿದೆ ಎಂದು ಕೇಳಿದಾಗ, “ನಾನು ಆ ಪತ್ರವನ್ನು ನೋಡಿಲ್ಲ. ಕಾಂಗ್ರೆಸ್ ಎಲ್ಲಾ ಸಮುದಾಯವನ್ನು ಸರಿಸಮನಾಗಿ ತೆಗೆದುಕೊಂಡು ಹೋಗಲು ಬದ್ಧವಾಗಿದೆ. ಎಲ್ಲರಿಗೂ ನ್ಯಾಯ ಒದಗಿಸುವ ಉದ್ದೇಶವಿದೆ. ಯಾರಿಗಾದರೂ ಅನ್ಯಾಯ ಮಾಡಬೇಕು ಎಂದು ಎಲ್ಲಿಯೂ ಹೇಳಿಲ್ಲ. ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬುವುದು ಪ್ರಮುಖ ಉದ್ದೇಶ. ಜೈನರು, ಒಕ್ಕಲಿಗರು, ಲಿಂಗಾಯತರು ಸೇರಿದಂತೆ ಎಲ್ಲಾ ಸಮುದಾಯದಲ್ಲೂ ಬಡವರಿದ್ದಾರೆ. ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು” ಎಂದು ಹೇಳಿದರು.

ವರದಿ ಅವೈಜ್ಞಾನಿಕ ಎಂಬ ಆರೋಪಗಳ ಬಗ್ಗೆ ಕೇಳಿದಾಗ, “ನಾವು ಈಗಿನ್ನು ಚರ್ಚೆ ಮಾಡುತ್ತಿದ್ದೇವೆ. ಕೆಲವರು ಸಲಹೆ ನೀಡುತ್ತಿದ್ದಾರೆ. ಈ ಸಮೀಕ್ಷೆಯಲ್ಲಿ 90% ಜನರಿಂದ ಮಾಹಿತಿ ಪಡೆದಿದ್ದಾರೆ. ನಾವಿನ್ನೂ ವರದಿ ತೆರೆದು ಅಧ್ಯಯನ ಆರಂಭಿಸಿದ್ದೇವೆ. ಇದಕ್ಕೆ ಸಮಯ ಬೇಕು. ಈ ವಿಚಾರದಲ್ಲಿ ಯಾವುದೇ ಆತುರದ ತೀರ್ಮಾನವಿಲ್ಲ” ಎಂದು ತಿಳಿಸಿದರು.

ಭಾವನೆಗಿಂತ ಬದುಕು ಮುಖ್ಯ

ಕರಾವಳಿ ಭಾಗದಲ್ಲಿ ಪಕ್ಷ ಬಲವರ್ಧನೆಗೆ ಆದ್ಯತೆ ನೀಡಲಾಗುತ್ತಿದೆಯೇ ಎಂದು ಕೇಳಿದಾಗ, “ಕರಾವಳಿ ಭಾಗದಲ್ಲಿ ಜನರ ಬದುಕು ಮುಖ್ಯ. ಭಾವನೆಗಿಂತ ಬದುಕು ಮುಖ್ಯ. ಈ ಭಾಗದಲ್ಲಿ ನಮ್ಮ ಪಕ್ಷದಿಂದ ಕೇವಲ ಇಬ್ಬರು ಶಾಸಕರು ಮಾತ್ರ ಗೆದ್ದಿದ್ದಾರೆ. ಈ ಭಾಗದಲ್ಲಿ ಎಲ್ಲರಿಗೂ ಒಳ್ಳೆಯದಾಗಬೇಕು. ರಾಜ್ಯದಲ್ಲಿ ಬಲಿಷ್ಠ ಸರ್ಕಾರ ಆಡಳಿತದಲ್ಲಿದೆ. ಇಲ್ಲಿ ನಮ್ಮ ಪ್ರತಿನಿಧಿಗಳು ಬೇಕು. ಈ ಭಾಗದಲ್ಲಿ ಜನ ಬಿಜೆಪಿ ಗೆಲ್ಲಿಸಿದರು. ಆದರೂ ಈ ಭಾಗದ ಕುಟುಂಬಗಳಿಗೆ ಕಾಂಗ್ರೆಸ್ ನಿಂದ ಸಹಾಯವಾಗುತ್ತಿದೆಯೇ ಹೊರತು ಬಿಜೆಪಿಯಿಂದಲ್ಲ. ಇದನ್ನು ಜನರಿಗೆ ಮನದಟ್ಟು ಮಾಡಬೇಕು” ಎಂದು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles