ಮ೦ಗಳೂರು: ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿವಾ೯ಹಕನ ವಿರುದ್ದ ಪ್ರಕರಣ ದಾಖಲಿಸಿಕೊ೦ಡಿರುವ ಕೊಣಾಜೆ ಪೊಲೀಸರು ಅರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಹಿಳಾ ಪ್ರಯಾಣಿಕರೊಬ್ಬರಿಗೆ ನಿವಾ೯ಹಕ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಬಾಗಲಕೋಟೆಯ ಮೂಲದ ಪ್ರದೀಪ್ ಕಾಶಪ್ಪ ನಾಯ್ಕರ್ (35) ಆರೋಪಿಯಾಗಿದ್ದಾನೆ.

ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್ ಬ್ಯಾಂಕ್‌ಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಈ ಘಟನೆ ನಡೆದಿತ್ತು. ಪ್ರಯಾಣದ ಸಮಯದಲ್ಲಿ ನಿದ್ರಿಸುತ್ತಿದ್ದ ಮಹಿಳೆಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ್ದಾನೆ.ಸಹ ಪ್ರಯಾಣಿಕನೊಬ್ಬ ಈ ಕೃತ್ಯವನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.
ಆರೋಪಿ ವಿರುದ್ದ ಎಫ್ಐಆರ್ ದಾಖಲಿಸಿ ವಶಕ್ಕೆ ಪಡೆಯಲಾಗಿದ್ದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ನಗರ ಪೋಲಿಸ್ ಆಯುಕ್ತರು ತಿಳಿಸಿದ್ದಾರೆ.ನಿವಾ೯ಹಕನನ್ನು ಕೆಎಸ್‌ಆರ್‌ಟಿಸಿ ಮ೦ಗಳೂರು ವಿಭಾಗೀಯ ನಿಯ೦ತ್ರಣಾಧಿಕಾರಿಯವರು ಅಮಾನತುಗೊಳಿಸಿದ್ದಾರೆ.
