ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನವು ನಗರದ ಕದ್ರಿ ಪಾರ್ಕ್ ಬಳಿ ಕಾರ್ಯನಿರ್ವಹಿಸುತ್ತಿದ್ದು ಹೆಚ್ಚು ಬೇಡಿಕೆಯ ಪ್ರದೇಶದಲ್ಲಿ ಈ ಸಭಾಂಗಣವನ್ನು ನಿರ್ಮಾಣ ಮಾಡಲಾಗಿದೆ.
ಕಟ್ಟಡವು ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ ಹಾಗೂ 70-80 ಜನರು ಕುಳಿತುಕೊಳ್ಳುವ ಸಾಮಥ್ರ್ಯವನ್ನು ಹೊಂದಿದೆ. ಸಭಾಂಗಣವನ್ನು ಮಕ್ಕಳಿಗೆ ಸಂಬಂಧಿಸಿದ ಚಟುವಟಿಕೆ (ನೃತ್ಯ, ಕರಾಟೆ, ಸಂಗೀತ, ಯಕ್ಷಗಾನ. ಕರಕುಶಲ ಕಲೆ, ಯೋಗ, ಚಿತ್ರಕಲೆ ಇತ್ಯಾದಿ ತರಗತಿ) ಗಳನ್ನು ನಡೆಸಲು ಇಲಾಖೆಯು ನಿಗದಿಪಡಿಸಿದ ಸಮಯ ಮತ್ತು ಸೇವಾಶುಲ್ಕಕ್ಕೆ ಬದ್ಧರಿರುವ ಆಸಕ್ತರಿಗೆ ನೀಡಲು ಉದ್ದೇಶಿಸಲಾಗಿದೆ. ಎಪ್ರಿಲ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಅಥವಾ ನಿಗದಿತ ಅರ್ಜಿ ನಮೂನೆಯನ್ನು ನಗರದ ಬಿಜೈ ಮೆಸ್ಕಾಂ ಬಳಿ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಛೇರಿಯಿಂದ ಪಡೆದು ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kadri Park Bala bhavana
