ಮಂಗಳೂರು : ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 13ರಂದು ನಡೆಯಲಿರುವ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ (ಐಆರ್‌ಸಿಎಸ್)ಯ ಕೇಂದ್ರ ಕಚೇರಿಯ ವಾರ್ಷಿಕ ಮಹಾ ಸಭೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆಯ ಪ್ರತಿನಿಧಿಯಾಗಿ ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಭಾಗವಹಿಸಲಿದ್ದಾರೆ.

ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ಪ್ರಧಾನ ಕಚೇರಿಯ ಅಧ್ಯಕ್ಷರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಧ್ಯಕ್ಷತೆಯಲ್ಲಿ, ರೆಡ್‌ಕ್ರಾಸ್ ಕೇಂದ್ರ ಕಚೇರಿಯ ಚೇರ್ಮನ್, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದೆ.
