ಮಂಗಳೂರು: ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ- ಪ್ರವರ್ಗ-1, ಎಸ್.ಸಿ. & ಎಸ್.ಟಿ.ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ, ಹಿಂದುಳಿದ ವರ್ಗ ಹಾಗೂ ಇತರೆ ರೂ. 1.00 ಲಕ್ಷ.
ವಿದ್ಯಾರ್ಥಿಗಳು ವೆಬ್‍ಸೈಟ್ https://shp.karnataka.gov.in/bcwd ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 20. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಗೆ ಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ/ತಾಲ್ಲೂಕು ಅಧಿಕಾರಿಗಳನ್ನು (ದೂ.ಸಂ:-8050770004 ಮತ್ತು 8050770005) ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಮಂಗಳೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..


