ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಸಮಿತಿ ವತಿಯಿಂದ ಎಸ್‌ಡಿಎಂ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್ ಸಹಯೋಗದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಜೂ.14ರಂದು ಬೆಳಗ್ಗೆ 11.15ಕ್ಕೆ ನಗರದ ಕೊಡಿಯಾಲ್‌ಬೈಲ್‌ನ ಎಸ್‌ಡಿಎಂ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆಯಲಿದೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರೆಡ್‌ಕ್ರಾಸ್ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ವೈದ್ಯಾಧಿಕಾರಿ
ಡಾ.ಶಿವಪ್ರಕಾಶ್.ಡಿ. ಎಸ್., ಎಸ್‌ಡಿಎಂ ಪಿ.ಜಿ.ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ ನಿರ್ದೇಶಕಿ ಡಾ.ಸೀಮಾ.ಎಸ್. ಶೆಣೈ,ಕೆಎಂಸಿಯ ಆರ್ಥೋ ವಿಭಾಗದ ಮುಖ್ಯಸ್ಥ ಡಾ.ಕೆ.ಆರ್.ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 15ಕ್ಕೂ ಅಧಿಕ ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವುದೆಂದು ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


