24.3 C
Karnataka
Thursday, April 30, 2026

ಕಾ೦ಗ್ರೆಸ್‌ ನಿಯೋಗ: ವರದಿ ಸಲ್ಲಿಕೆ

ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಅಹಿತಕರ ಘಟನೆಗಳ ವಾಸ್ತವ ಮತ್ತು ನೈಜತೆಯ ವರದಿ ಪಡೆಯಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಳುಹಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸೀರ್ ಹುಸೇನ್ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ ಅವರ ನೇತೃತ್ವದ ನಿಯೋಗವು ವರದಿಯನ್ನು ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಲ್ಲಿಸಿತು.
ನಿಯೋಗವು ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ಎಲ್ಲಾ ಧರ್ಮ, ಸಮುದಾಯದ ಮುಖಂಡರುಗಳನ್ನ ಭೇಟಿ ಮಾಡಿ ವರದಿಯನ್ನು ತಯಾರಿಸಿತ್ತು. ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ವಿ. ಆರ್ ಸುದರ್ಶನ್ , ಮಾಜಿ ಸಚಿವ ಕಿಮ್ಮನೆ ರತ್ನಾಕರ್ , ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles