24.3 C
Karnataka
Thursday, April 30, 2026

ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್‌ಆರ್‌ಐ ‘ಅಂತರ್ದೃಷ್ಟಿ ಮತ್ತು ಸಂವಾದ’ ಸಭೆ

ದುಬೈ, : ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಮಂಗಳೂರು ಮೂಲದ ವ್ಯಕ್ತಿಡಯಾನ್ ಡಿಸೋಜಾ ಇವರು ನಡೆಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಡಯಾನ್’ ಅವರು, ಪ್ರಸ್ತುತ ಬ್ಯಾಂಕಿಂಗ್ ಪರಿಸ್ಥಿತಿ ಮತ್ತು ಎಂಸಿಸಿ ಬ್ಯಾಂಕ್‌ನ ಸ್ಥಿತಿಗತಿಯ ಬಗ್ಗೆ ಪ್ರಸ್ತಾಪಿಸಿದರು. ದಾಯ್ಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಸಮುದಾಯವನ್ನು ಒಂದು ಗುರಿಯತ್ತ ಏಕಮತದಿಂದ ಒಗ್ಗೂಡಿಸುವ ಮಹತ್ವದ ಕುರಿತು ಮಾತನಾಡಿದರು.


ನಂತರ ಎಂಸಿಸಿ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷ ಅನಿಲ್ ಲೋಬೊ ಅವರೊಂದಿಗೆ ವಿಚಾರ ವಿನಿಮಯ ನಡೆಯಿತು. ಅವರು ಬ್ಯಾಂಕ್‌ನ ಪ್ರಗತಿ, ಅಧ್ಯಕ್ಷ ಸ್ಥಾನ ಸ್ವೀಕರಿಸುವ ಮೊದಲು ಹಾಗೂ ನಂತರದ ಸ್ಥಿತಿ ಮತ್ತು ಆ ವರ್ಷಗಳಲ್ಲಿ ಕಂಡ ಅಭಿವೃದ್ಧಿಯ ಕುರಿತು ವಿವರಿಸಿದರು. ಜೊತೆಗೆ ಹೊಸ ಶಾಖೆಗಳ ಸ್ಥಾಪನೆ ಮತ್ತು ಆನ್‌ಲೈನ್ ಹಾಜರಾತಿ ಮೂಲಕ ಬ್ಯಾಂಕ್ ವಿಸ್ತರಣೆಯ ಭವಿಷ್ಯ ಯೋಜನೆಗಳನ್ನೂ ಹಂಚಿಕೊಂಡರು.
ಈ ಕಾರ್ಯಕ್ರಮವು ದುಬೈಯ ವಿವಿಧ ಉದ್ಯಮಿಗಳು, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದ ಸ್ವಯಂಸೇವಕರನ್ನು ಒಂದೆಡೆ ಸೇರಿಸಿ ಸಂವಾದ ಮತ್ತು ನೆಟ್’ವರ್ಕಿಂಗ್‌ಗೆ ವೇದಿಕೆಯಾಯಿತು.
ಜೋಸೆಫ್ ಮಾಥಿಯಾಸ್, ಸ್ಟೀಫನ್ ಮಿನೇಜಸ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ರೋಶನ್ ಡಿಸಿಲ್ವಾ ನಿರ್ವಹಿಸಿದರು. ,ಆಲ್ವಿನ್ ಪಿಂಟೊ ಧನ್ಯವಾದ ನೀಡಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles