24.8 C
Karnataka
Thursday, April 30, 2026

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೆಷನ್ ಸಭೆ : ಸ್ಪೀಕರ್ ಭಾಗಿ

ಮಂಗಳೂರು: ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಭಾರತ ವಲಯದ ಜೋನ್-II ರ ಸಮ್ಮೇಳನದಲ್ಲಿ ಸ್ಪೀಕರ್ ಯು.ಟಿ.ಖಾದರ್ ಫರೀದ್ ಭಾಗವಹಿಸಿದರು.
ಸೋಮವಾರ ಮತ್ತು ಮಂಗಳವಾರ ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನದಲ್ಲಿ ನಡೆದ ಸಮ್ಮೇಳನದಲ್ಲಿ ಹಿಮಾಚಲ ಪ್ರದೇಶದ ವಿಧಾನಸಭೆಯ ಸಭಾಧ್ಯಕ್ಷ ಕುಲ್‍ದೀಪ್ ಸಿಂಗ್ ಪತಾನಿಯಾ ಅವರ ಆಹ್ವಾನದ ಮೇರೆಗೆ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಅವರು ಭಾಗವಹಿಸಿ ರಾಜ್ಯ ಸಂಪತ್ತುಗಳ ನಿರ್ವಹಣೆ ಹಾಗೂ ರಾಜ್ಯದ ಅಭಿವೃದ್ಧಿಯಲ್ಲಿ ಶಾಸನಮಂಡಳಿಗಳ ಪಾತ್ರ, ಶಾಸನ ಮಂಡಳಿಗಳ ಕಾರ್ಯಪದ್ಧತಿಗಳಲ್ಲಿ ಕೃತಕ ಬುದ್ಧಿಮತ್ತೆ ಬಳಸುವಿಕೆ ವಿಷಯದ ಬಗ್ಗೆ ಅಭಿಪ್ರಾಯ ಮಂಡಿಸಿದರು. ಲೋಕಸಭೆ ಸಭಾಧ್ಯಕ್ಷ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ಸಮ್ಮೇಳನವು ಜರುಗಿತು.
ಸಮ್ಮೇಳನದಲ್ಲಿ ಜೋನ್-2 ರ ರಾಜ್ಯಗಳಾದ ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಪಂಜಾಬ್, ಹರಿಯಾಣ, ಮತ್ತು ನವದೆಹಲಿ ರಾಜ್ಯಗಳ ವಿಧಾನ ಸಭಾಧ್ಯಕ್ಷರುಗಳು, ಇತರೆ ರಾಜ್ಯಗಳ ಫೀಠಾಸೀನಾಧಿಕಾರಿಗಳು ಭಾಗವಹಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles