ಮ೦ಗಳೂರು: ಯುವಕನೋವ೯ ಪ್ರೀತಿಸುತ್ತಿದ್ದ ಯುವತಿಯ ಜತೆ ಜಗಳ ಮಾಡಿ ಆಕೆಗೆ ಚಾಕುವಿನಿಂದ ಇರಿದು ಬಳಿಕ ಆತ್ಮಹತ್ಯೆ ಮಾಡಿಕೊ೦ಡಿರುವ ಘಟನೆ ಫರಂಗಿಪೇಟೆ, ಸುಜೀರ್ ಮಲ್ಲಿ ಎಂಬಲ್ಲಿ ಸೋಮವಾರ ಸ೦ಭವಿಸಿದೆ. ಫರಂಗಿಪೇಟೆ ನಿವಾಸಿ ದಿವ್ಯಾ ಯಾನೆ ದೀಕ್ಷಿತಾ (26) ಇರಿತಕ್ಕೊಳಗಾದ ಯುವತಿಯಾಗಿದ್ದು, ಕೋಡ್ಮನ್ ನಿವಾಸಿ ಸುಧೀರ್ (30) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ,
ದಿವ್ಯಾ ಯಾನೆ ದೀಕ್ಷಿತಾ (26) ಹಾಗೂ ಸುಧೀರ್ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಕಳೆದ ಕೆಲ ತಿಂಗಳುಗಳಿಂದ ಇವರಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿರುತ್ತದೆ. ಆದರೂ ಸುಧೀರ್ ಫೋನ್ ಮಾಡುವುದು, ಹಿಂಬಾಲಿಸುವುದು, ಮಾಡುತ್ತಿದ್ದ. ಪ್ರಕರಣ ಮುಂದುವರಿದಂತೆ ಸುಧೀರ್ ಸೋಮವಾರ ಬೆಳಿಗ್ಗೆ ಫರಂಗಿಪೇಟೆ, ಸುಜೀರ್ ಮಲ್ಲಿ ಎಂಬಲ್ಲಿಗೆ ಬಂದು ದಿವ್ಯಾಳೊಂದಿಗೆ ಮದುವೆಯಾಗುವಂತೆ ಒತ್ತಾಯಿಸಿದ್ದ. ಮಾತಿಗೆ ಮಾತು ಬೆಳೆದು ಇವರಿಬ್ಬರ ನಡುವೆ ಗಲಾಟೆ ನಡೆದಿದ್ದು ಈ ವೇಳೆ ಸುಧೀರ್ ತಾನು ತಂದಿದ್ದ ಚಾಕುವಿನಿಂದ ದಿವ್ಯಾ ನನ್ನು ಸಾಯಿಸಲು ಚುಚ್ಚಿರುತ್ತಾನೆ. ಆಕೆ ತಪ್ಪಿಸಿಕೊಂಡು ಹೋಗುತ್ತಾ ಬಿದ್ದಾಗ, ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಅಲ್ಲಿಂದ ತೆರಳಿ ದಿವ್ಯಾಳ ಬಾಡಿಗೆ ಮನೆಗೆ ಹೋಗಿ, ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
Young man commits suicide by stabbing Girl


