24.3 C
Karnataka
Thursday, April 30, 2026

ಜುಲೈ 23 : ಮಂಗಳೂರಿನಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ

ಮಂಗಳೂರು: ಲೋಕಾಯುಕ್ತ ಜನಸಂಪರ್ಕ ಸಭೆ ಜುಲೈ 23 ರಂದು ಬೆಳಿಗ್ಗೆ 11 ಗಂಟೆಯಿಂದ ಮಂಗಳೂರು ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿದೆ.
ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜುಲೈ 23 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು.
ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದು. ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು:- ಪೊಲೀಸ್ ಅಧೀಕ್ಷಕರ ಕಛೇರಿ-0824 2950997/ 9364062517, ಪೊಲೀಸ್ ಉಪಾಧೀಕ್ಷಕರು-1 ಕಛೇರಿ-0824 2453420/ 9364062579, ಪೊಲೀಸ್ ಉಪಾಧೀಕ್ಷಕರು-2 ಕಛೇರಿ-0824 2453420 /9364062580, ಪೊಲೀಸ್ ನಿರೀೀಕ್ಷಕರು-1 ಕಛೇರಿ-0824 2427237/ 9364062691, ಪೊಲೀಸ್ ನಿರೀಕ್ಷಕರು-2 ಕಛೇರಿ- 0824 2427237/ 9364062693.
ಅರ್ಜಿದಾರರು ನಮೂನೆ I & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೋಲಿಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles