ಮ೦ಗಳೂರು: ಬೆಳ್ತಂಗಡಿ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆ ದಾಳಿಯಿಂದ ಓರ್ವ ಮೃತಪಟ್ಟ ಘಟನೆ ಗುರುವಾರ ಸ೦ಭವಿಸಿದೆ.ಸೌತಡ್ಕ ನಿವಾಸಿ ಬಾಲಕೃಷ್ಣ (60) ಮೃತಪಟ್ಟವರು.
ಗುರುವಾರ ಬೆಳಗ್ಗೆ ಸುಮಾರು 11 ರಿಂದ 12 ಗಂಟೆಯ ಅವಧಿಯಲ್ಲಿ ಗೇರು ಪ್ಲಾ೦ಟೇಶನ್ ಬಳಿ ಬಾಲಕೃಷ್ಣ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿರುತ್ತಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


