24.5 C
Karnataka
Thursday, April 30, 2026

ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಪತ್ತೆ, ಮೂವರು ಆರೋಪಿಗಳ ಸೆರೆ

ಮ೦ಗಳೂರು: ಮಂಗಳೂರು ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆ ಭಾಗವಾಗಿ ದೊಡ್ಡ ಪ್ರಮಾಣದ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರು ಆಂಧ್ರಪ್ರದೇಶದಿಂದ ಗಾಂಜಾ ಸಾಗಾಟ ಮಾಡುತ್ತಿದ್ದರು.

ಕಾಸರಗೋಡು ಆಡೂರು ನಿವಾಸಿ ಮಸೂದ್ ಎಂ.ಕೆ(45 ), ದೇಲಂಪಾಡಿ ಪರಪ್ಪದ ನಿವಾಸಿಗಳಾದ ಮೊಹಮ್ಮದ್ ಆಶಿಕ್ ( 24),ಸುಬೇರ್ ( 30 ) ಬ೦ಧಿತ ಆರೋಪಿಗಳು.

ಜು.31 ರಂದು 2 ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರು ಖಚಿತ ಮಾಹಿತಿಯನ್ನು ಪಡೆದು, ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ ಮಠದಕೆರೆ ಎಂಬ ಸ್ಥಳದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಮೇತ 2 ವಾಹನಗಳನ್ನು ಪತ್ತೆಹಚ್ಚಿರುತ್ತಾರೆ.


ಪೊಲೀಸರು ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು ಮತ್ತು 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದು, ಈ ಎಲ್ಲಾ ಸೊತ್ತಿನ ಒಟ್ಟು ಮೌಲ್ಯ ಸುಮಾರು 46, 20,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


ಮಂಗಳೂರು ನಗರ ಪೊಲೀಸರಿಂದ ನಿರಂತರವಾಗಿ ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯು ಮುಂದುವರೆದಿರುತ್ತದೆ, ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.


Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles