ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪೆÇ್ರೀಗ್ರಾಮಿಂಗ್ ಮತ್ತು ಸಿಸ್ಟಮ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.
ಸೆಪ್ಟೆಂಬರ್ 5 ರೊಳಗಾಗಿ ನಗರದ ಬಿಜೈನಲ್ಲಿರುವ ವಿಭಾಗೀಯ ಕಛೇರಿಗೆ ಅರ್ಜಿ ಸಲ್ಲಿಸಬೇಕು. ಸೆಪ್ಟೆಂಬರ್ 10 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಕೆ.ಎಸ್.ಆರ್.ಟಿ.ಸಿ ಮಂಗಳೂರು ಹಿರಿಯ ವಿಭಾಗೀಯ ನಿಯಂತ್ರಂಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


