24.8 C
Karnataka
Thursday, April 30, 2026

ಮೊರಾರ್ಜಿ ದೇಸಾಯಿ ಪಿಯು ಕಾಲೇಜು ಪ್ರವೇಶ: ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರು ತಾಲೂಕಿನ ಬಲ್ನಾಡು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ 2025-26ನೇ ಸಾಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ಪಿಯುಸಿಯು ಪಿಸಿಎಂಬಿ ಹಾಗೂ ಪಿಸಿಎಂಸಿ ಸಂಯೋಜನೆಗಳಾದ ತಲಾ 40 ಸೀಟುಗಳಿಗೆ ಎಸ್‍ಎಸ್‍ಎಲ್‍ಸಿ ಅಂಕ ಮತ್ತು ಸರ್ಕಾರದ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
2024-25ನೆ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಉಚಿತ ಊಟ, ವಸತಿ, ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಇತರ ಸಾಮಗ್ರಿಗಳನ್ನು ನೀಡಲಾಗುತ್ತದೆ.
ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ-1 ರ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ.2.5 ಲಕ್ಷ, ಇತರೇ ಹಿಂದುಳಿದ ವರ್ಗದ ಆದಾಯದ ಮಿತಿ ರೂ. 1 ಲಕ್ಷದ ಒಳಗಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 25.
ವಿದ್ಯಾರ್ಥಿಗಳ ಆಯ್ಕೆಯು ಎಸ್‍ಎಸ್‍ಎಲ್‍ಸಿ ಅಂಕಗಳ ಆಧಾರದ ಮೇಲೆ ವರ್ಗಾವಾರು, ಲಿಂಗವಾರು, ಮತ್ತು ಸಂಯೋಜನೆವಾರು ಮೆರಿಟ್ ರ್ಯಾಂಕಿಂಗ್ ಪಟ್ಟಿಯನ್ನು ತಯಾರಿಸಿ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನ ಪ್ರಾಂಶುಪಾಲರನ್ನು (ದೂ.ಸಂ: 8951607469/9108016471) ಸಂಪರ್ಕಿಸಬಹುದು ಎಂದು
ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles