ಮೂಡಬಿದಿರೆ: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವ ಅವರು ಮ೦ಗಳವಾರ ನಿಧನರಾದರು.106 ವರ್ಷ ಪ್ರಾಯದ ಆನಂದ ಆಳ್ವ ಅವರು ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲರಾಗಿ ಗುರುತಿಸಿಕೊಂಡಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಪ್ರಗತಿಪರ ರೈತರೂ ಆಗಿದ್ದ ಅವರು, ಡಾ. ಮೋಹನ್ ಆಳ್ವ ಸಹಿತ ಮೂವರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.