ಬೆ೦ಗಳೂರು: ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಾಡಿತ್ತಾಯ, ಸಮಾಜ ಸೇವಕ ಚಾರ್ಮಾಡಿ ಹಸನಬ್ಬ ಸೇರಿದ೦ತೆ 68 ಮಂದಿಗೆ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.ಕನ್ನಡ ಮತ್ತು ಸ೦ಸ್ಕೃತಿ ಇಲಾಖಾ ಸಚಿವ ಶಿವರಾ ತ೦ಗಡಗಿ ಅವರು ಮ೦ಗಳವಾರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದರು.
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗೆ ಸ೦ಬ೦ಧಿಸಿದ೦ತೆ ಯಕ್ಷಗಾನದಲ್ಲಿ ಲೀಲಾವತಿ ಬೈಪಡಿತ್ತಾಯ, ಆರ್ಗೋಡು ಮೋಹನ್‌ದಾಸ್ ಶೆಣೈ, ಸಮಾಜ ಸೇವೆಯಲ್ಲಿ ಚಾರ್ಮಾಡಿ ಹಸನಬ್ಬ, ವೈದ್ಯಕೀಯ ಕ್ಶೇತ್ರದಲ್ಲಿ ಡಾ.ಪ್ರಶಾಂತ್ ಶೆಟ್ಟಿ, ಸಂಕೀರ್ಣ ಕ್ಶೇತ್ರದಲ್ಲಿ ಹಾಜಿ ಅಬ್ದುಲ್ಲಾ ಪರ್ಕಳ, ಪತ್ರಿಕೋದ್ಯಮದಲ್ಲಿ ದಿನೇಶ್ ಅಮೀನ್‌ಮಟ್ಟು ಅವರಿಗೆ ಪ್ರಶಸ್ತಿ ಲಭಿಸಿದೆ.ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಸುವರ್ಣ ವರ್ಷದ ನೆನಪಿಗಾಗಿ ಕನ್ನಡ, ಕರ್ನಾಟಕದ ಏಳಿಗೆಗಾಗಿ ಶ್ರಮಿಸಿದ 10 ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಲಾಗಿದ್ದು ದಕ್ಷಿಣ ಕನ್ನಡದ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಮತ್ತು ಮಾರುತಿ ಜನಸೇವಾ ಸಂಘಕ್ಕೆ ಪ್ರಶಸ್ತಿ ಲಭಿಸಿದೆ.