24.3 C
Karnataka
Thursday, April 30, 2026

ಚರಂಡಿಗೆ ಬಿದ್ದು ಲಾರಿ ಚಾಲಕ ಸಾವು

ಚರಂಡಿಗೆ ಬಿದ್ದು ಲಾರಿ ಚಾಲಕ ಸಾವು

ಮ೦ಗಳೂರು: ರಸ್ತೆ ಕಾಮಗಾರಿಯ ಕಾಂಕ್ರೀಟ್‌ ಚರಂಡಿಯ ಒಳಗೆ ಬಿದ್ದು ಲಾರಿ ಚಾಲಕ ಮೃತಪಟ್ಟ ಘಠನೆ ಬೆಳ್ತಂಗಡಿ ತಾಲೂಕು ರೇಖ್ಯಾ ಗ್ರಾಮ ನೇಲ್ಯಡ್ಕದಲ್ಲಿ ಬುಧವಾರ ರಾತ್ರಿ ಸ೦ಭವಿಸಿದೆ.ಬೆಂಗಳೂರು ನೆಲಮಂಗಲ ನಿವಾಸಿ ತಂದೆ ಹುನಮಂತರಾಯಪ್ಪ (60) ಮೃತಪಟ್ಟವರು.
ಹುನಮಂತರಾಯಪ್ಪ ಅವರು ಮಂಗಳೂರಿನಿಂದ ಬೆಂಗಳೂರು ಕಡೆಗೆ ಅವರ ಲಾರಿಯನ್ನು ಚಲಾಯಿಸಿಕೊಂಡು ಬಂದು ಬುಧವಾರ ತಡ ರಾತ್ರಿ 1 ಗಂಟೆ ಸುಮಾರಿಗೆ ನೇಲ್ಯಡ್ಕ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಮೂತ್ರ ವಿಸರ್ಜನೆ ಅಥವಾ ಇನ್ಯಾವುದೋ ಕಾರಣಕ್ಕೆ ಲಾರಿಯಿಂದ ಇಳಿದು ರಸ್ತೆ ಬದಿಗೆ ಹೋಗಿದ್ದಾರೆ. ಈ ಸ೦ದಭ೯ದಲ್ಲಿ ಆಕಸ್ಮಿಕವಾಗಿ ರಸ್ತೆ ಕಾಮಗಾರಿಯಲ್ಲಿರುವ ಕಾಂಕ್ರೀಟ್‌ ಚರಂಡಿಯ ಒಳಗೆ ಬಿದ್ದು ಅಸ್ವಸ್ಥರಾದವರನ್ನು ಚಿಕಿತ್ಸೆಯ ಬಗ್ಗೆ ಆಸ್ಪತ್ರೆಗೆ ಸಾಗಿಸುವ ಸಮಯ ದಾರಿ ಮದ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles