24.5 C
Karnataka
Thursday, April 30, 2026

ಬಾಡಿಗೆ ಮನೆಯಲ್ಲಿ ಆಕ್ರಮ ಮದ್ಯ ತಯಾರಿ : ಇಬ್ಬರ ಬ೦ಧನ

ಮ೦ಗಳೂರು: ಉಳ್ಳಾಲ ತಾಲೂಕು ಪಜೀರು ಗ್ರಾಮದ ಕಂಬಳಪದವು ಪ್ರದೇಶದಲ್ಲಿ ಅಕ್ರಮ ಮದ್ಯ ತಯಾರಿಸುತ್ತಿದ್ದ ಮನೆಯೊ೦ದಕ್ಕೆ ದಾಳಿ ನಡೆಸಿರುವ ಪೊಲೀಸರು ಇಬ್ಬರನ್ನು ಬ೦ಧಿಸಿದ್ದಾರೆ. ಸ್ಥಳದಿ೦ದ ಅಕ್ರಮ ಮದ್ಯ ಮತ್ತು ತಯಾರಿಕಾ ಯಂತ್ರೋಪಕರಣಗಳು, ಮದ್ಯ ಬಾಟ್ಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಣವ್ ಪಿ. ಶೆಣೈ (24) ಹಾಗೂ ಅನೂಷ್ ಆರ್. (24) ಬ೦ಧಿತ ಆರೋಪಿಗಳು.

ಬಾಡಿಗೆ ಮನೆ ಅಕ್ರಮ ತಯಾರಿ ನಡೆಯುತ್ತಿರುವ ಬಗ್ಗೆ ದೊರೆತ ಮಾಹಿತಿಯ ಮೇರೆಗೆ, ಕೊಣಾಜೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿಸುಮಾರು ರೂ. 1,15,110/- ಮೌಲ್ಯದ ಆಕ್ರಮ ಮದ್ಯ ಮತ್ತು ತಯಾರಿಕಾ ಯಂತ್ರೋಪಕರಣಗಳು, ಮದ್ಯ ಬಾಟ್ಲಿಗಳು ಮತ್ತು ಗೋವಾ ರಾಜ್ಯದಲ್ಲಿ ಮಾತ್ರ ಮಾರಾಟಕ್ಕೆ ಪರವಾನಗಿ ಇರುವ Mansion House ಬಾಟ್ಲಿಗಳನ್ನು ವಶಪಡಿಸಿಕೊಂಡಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಕಾರ್ಯಾಚರಣೆಯು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಮಿಥುನ್ , ಹಾಗೂ ಉಪ ಪೊಲೀಸ್ ಆಯುಕ್ತ ರವಿಶಂಕರ್ ಅವರ ಮಾರ್ಗದರ್ಶನದಲ್ಲಿ ಹಾಗೂ ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಕೊಣಾಜೆ ಠಾಣಾ ಸಿಬ್ಬಂದಿಗಳಿಂದ ಯಶಸ್ವಿಯಾಗಿ ಕೈಗೊಳ್ಳಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles