24.5 C
Karnataka
Thursday, April 30, 2026

`ಗಜಾನನ ಕ್ರಿಕೆಟರ್ಸ್’ ಜನವರಿಯಲ್ಲಿ ತೆರೆಗೆ

ಮ೦ಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ.
ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆ ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆಒಳಗೊಂಡಿದೆ.


ಕೀರ್ತನ್ ಭಂಡಾರಿ ಅವರು ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಮಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಬಹುಪಾಲು ಚಿತ್ರೀಕರಣ ನಡೆದಿದೆ. ಈ ಚಿತ್ರದಲ್ಲಿ ನಿರ್ಮಾಪಕರಾದ ಪ್ರಜ್ವಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.ಚಿತ್ರದ ತಾರಾಗಣದಲ್ಲಿವಿನೀತ್ ಕುಮಾರ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು, ಉಮೇಶ್ ಮಿಜಾರು, ಸಮತಾ ಅಮೀನ್, ಅನ್ವಿತಾ ಸಾಗರ್, ಸರ್ವೋತ್ತಮ ಶೆಟ್ಟಿ, ವಾಲ್ಟರ್ ನಂದಳಿಕೆ, ರೂಪಾ ವರ್ಕಾಡಿ, ಲಂಚೂ ಲಾಲ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಪುಷ್ಪರಾಜ್ ಬೊಳ್ಳಾರು, ಸಚಿನ್ ಮಾಡ, ಜೇಮ್ಸ್ ಮೆಂಡೋನ್ಸಾ, ಕರಣ್ ಪೂಜಾರಿ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.
ವಿನುತ್ ಕೆ. ಸುವರ್ಣ ಅವರ ಛಾಯಾಗ್ರಹಣ, ಸುಜಯ್ ಶಿವರಾಮ್ ಹಾಗೂ ಕೌಶಿಕ್ ಭಂಡಾರಿ ಅವರ ಸಂಕಲನ ಚಿತ್ರದ ತಂತ್ರಜ್ಞಾನ ಮಟ್ಟವನ್ನು ಉತ್ತುಂಗಕ್ಕೆ ಕೊಂಡೊಯ್ಯುತ್ತದೆ.ಗೀತಾ ಸಾಹಿತ್ಯವನ್ನು ನಿರ್ದೇಶಕರಾದ ಕೀರ್ತನ್ ಭಂಡಾರಿ ರಚಿಸಿದ್ದಾರೆ. ಅವರು ಇದಕ್ಕೂ ಮೊದಲು ತುಳು ಮತ್ತು ಕನ್ನಡ ಭಾಷೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಿಗೆ ಹಾಡುಗಳನ್ನು ಬರೆದಿರುವ ಅನುಭವ ಹೊಂದಿದ್ದಾರೆ.ಸಹ ನಿರ್ಮಾಪಕರು:ರೋಹನ್ ಪಿರೇರ ವಾಮಂಜೂರು ಮತ್ತು ಸಂತೋಷ್ ಲಾಡ್.
ಸಂಗೀತ: ಸೃಜನ್ ಕುಮಾರ್ ತೋನ್ಸೆ ಅವರಿಂದ ನೀಡಲಾಗಿದೆ.ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ.
ತುಳುನಾಡು ಚಿತ್ರರಂಗಕ್ಕೆ ಹೊಸ ಸಂಚಲನ ನೀಡಬಲ್ಲ ಚಿತ್ರವೆಂದು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆಎಂದು ನಿರ್ಮಾಪಕರಾದ ಪ್ರಜ್ವಲ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles