ಮ೦ಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು ಮಾಡಿರುವ ನಾಲ್ಕು ಮ೦ದಿ ಬ್ಯಾಗೇಜ್ ನೌಕರರನ್ನು ಬಂಧಿಸಲಾಗಿದೆ. ಅರೋಪಿಗಳಿ೦ದ ಚಿನ್ನಭರಣ ಹಾಗೂ ನಗದು ವಶ ಪಡಿಸಿಕೊಳ್ಳಲಾಗಿದೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ AIR INDIA SATS ಕಂಪೆನಿಯಲ್ಲಿ ಲೋಡರ್ ಅನಲೋಡರ್ ಕೆಲಸ ಮಾಡಿಕೊಂಡಿರುವ ಮಂಗಳೂರು ತಾಲೂಕು ಕಂದಾವರದ ನಿವಾಸಿ ನಿತಿನ್, ಮೂಡುಪೆರಾರದ ನಿವಾಸಿಗಳಾದ ಸದಾನಂದ ಮತ್ತು ರಾಜೇಶ್ ಮತ್ತು ಬಜಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಬ೦ಧಿತ ಆರೋಪಿಗಳು.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಿಳಾ ಪ್ರಯಾಣಿಕರೊಬ್ಬರು 30-08-2025 ರಂದು ಬೆಳಿಗ್ಗೆ ಬೆಂಗಳೂರಿನಿಂದ AIR INDIA EXPRESS ವಿಮಾನದಲ್ಲಿ ಪ್ರಯಾಣ ಮಾಡಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ವಿಮಾನ ನಿಲ್ದಾಣದ ಬ್ಯಾಗೆಜ್

ಬೇಲ್ಟ್ ನಿಂದ ತಮ್ಮ ಲಗೇಜ್ ನ್ನು ಪಡೆದು ಚೆಕ್ ಮಾಡಿದಾಗ 56 ಗ್ರಾಂ ತೂಕದ ಚಿನ್ನಾಭರಣ ಕಳವು ಆಗಿರುವುದು ಕ೦ಡುಬ೦ದಿತ್ತು. , ಈ ಬಗ್ಗೆ ಪ್ರಯಾಣಿಕರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ ಮೇರೆಗೆ ಕಳವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ವಿಮಾನದಲ್ಲಿದ್ದ ಲಗೇಜ್ ನಿಂದ ಚಿನ್ನಾಭರಣ ಕಳವು ಮಾಡಿರುವುದಾಗಿ

ಒಪ್ಪಿಕೊಂಡಿರುತ್ತಾರೆ. ಆರೋಪಿತರು ಮೂಡುಪೆರಾರದ ನಿವಾಸಿ ರವಿರಾಜ್ ಎಂಬಾತನಿಗೆ ಚಿನ್ನಾಭರಣವನ್ನು ಮಾರಿದ್ದು, ಆರೋಪಿತರಿಂದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ 50 ಗ್ರಾಂ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಳ್ಳಲಾಗಿದೆ. ರವಿರಾಜ್ ಎಂಬವನನ್ನು ಸಹ ಕಳವು ಮಾಲನ್ನು ಸ್ವೀಕರಿಸಿದ ಆರೋಪದ ಮೇರೆಗೆ ಬಂಧಿಸಲಾಗಿದೆ.

ವಿಚಾರಣೆಯಲ್ಲಿ ಈ ಹಿಂದೆ 2025 ನೇ ಸಾಲಿನ ಜನವರಿ ತಿಂಗಳಿನಲ್ಲಿ ಇದೇ ರೀತಿ ಪ್ರಯಾಣಿಕರೋವ೯ರ ಬ್ಯಾಗಿನಿಂದ ಕಳವು ಮಾಡಿದ್ದ 2 ಲಕ್ಷ ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಬಗ್ಗೆ ಈಗಾಗಲೇ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಹಂತದಲ್ಲಿತ್ತು. ಈ ಎಲ್ಲಾ ಆರೋಪಿಗಳು ಸುಮಾರು 9 ವರ್ಷಗಳಿಂದ AIR INDIA SATS ರಲ್ಲಿ ಕೆಲಸವನ್ನು ನಿರ್ವಹಿಸಿರುತ್ತಾರೆ.
ಪ್ರಾಥಮಿಕ ತನಿಖೆಯಲ್ಲಿ ಕಂಡಬಂದಿರುವುದೆನೆಂದರೆ, ವಿಮಾನದ ಪ್ರಾಯಾಣಿಕರು ಬೆಲೆ ಬಾಳುವ ವಸ್ತುಗಳಾದ ಚಿನ್ನ, ನಗದನ್ನು ಬ್ಯಾಗೇಜ್ ನಲ್ಲಿ ಕಳುಹಿಸುವಾಗ ಸದ್ರಿ ಆರೋಪಿಗಳು ಬ್ಯಾಗ್ ತೆರೆದಿದ್ದಲ್ಲಿ ಹುಡುಕುವುದು. ಕೆಲವೊಮ್ಮೆ ಬ್ಯಾಗ್ ಲಾಕ್ ನ ಸುಲಭ ಪಾಸ್ ವಾರ್ಡ್ ಸಂಖ್ಯೆಗಳಿದ್ದಲ್ಲಿ ಪ್ರಯತ್ನಿಸಿ ಕಳವು ಮಾಡುತ್ತಿರುವುದು ಕಂಡು ಬ೦ದಿರುತ್ತದೆ. ಪ್ರಯಾಣಿಕರು ಈ ರೀತಿ ನಿರ್ಲಕ್ಷ್ಯತೋರದೇ, ಜಾಗೃತೆಯಿಂದ ಇರಬೇಕಾಗಿ ಮ೦ಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ. .


