24.5 C
Karnataka
Thursday, April 30, 2026

ಸೆ.22 ರಿಂದ ಕೆ.ಎಸ್.ಆರ್.ಟಿ.ಸಿ ದಸರಾ ಪ್ಯಾಕೇಜ್ ಪ್ರವಾಸ

ಮಂಗಳೂರು: ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಸಿಗಂದೂರು ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಾಚರಣೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಕಾರ್ಯಾಚರಿಸಲು ಯೋಜಿಸಲಾಗಿದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆಗಳಿಗೆ ವೆಬ್‍ಸೈಟ್ www.ksrtc.in ನಲ್ಲಿ ಮುಂಗಡ ಆಸನ ಕಾಯ್ದಿರಿಸಲು ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳಬಹುದು. ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣದರದ ವಿವರ

1)ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ (ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8:30):-
ಮಂಗಳೂರು ಬಸ್ಸು ನಿಲ್ದಾಣದಿಂದ-ಮರೋಳಿ ಸೂರ್ಯ ನಾರಾಯಣ ದೇವಸ್ಥಾನ-ಶ್ರೀ ಮಂಗಳಾದೇವಿ ದೇವಸ್ಥಾನ- ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನ-ಹೊಸನಾಡು ಕೊಡ್ಯಾಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಶ್ರೀ ಕಟೀಲು ದುರ್ಗಾಪರಮೆಶ್ವರಿ ದೇವಸ್ಥಾನ-ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಲ್ಕಿ-ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ-ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ – ಶ್ರೀ ಉರ್ವ ಮಾರಿಯಮ್ಮ ದೇವಸ್ಥಾನ – ಕುದ್ರೋಳಿ ಗೋಕರ್ಣನಾಥ ದೇವಸ್ಥಾನ, ಮಂಗಳೂರು ಬಸ್ಸ್ ನಿಲ್ದಾಣ. ಪ್ರಯಾಣದರ ವಯಸ್ಕರಿಗೆ ರೂ.500 ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) ರೂ.400.

2)ಮಂಗಳೂರು-ಮಡಿಕೇರಿ ಪ್ಯಾಕೇಜ್ ಪ್ರವಾಸ (ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9:30):-
ಮಂಗಳೂರು-ಮಡಿಕೇರಿ-ರಾಜಾಸೀಟ್-ಅಬ್ಬಿಫಾಲ್ಸ್-ನಿಸರ್ಗಧಾಮ-ಗೋಲ್ಡನ್ ಟೆಂಪಲ್-ಮಂಗಳೂರು ಬಸ್ಸ್ ನಿಲ್ದಾಣ. ಪ್ರಯಾಣದರ ವಯಸ್ಕರಿಗೆ ರೂ.600, ಮಕ್ಕಳಿಗೆ (6ವರ್ಷದಿಂದ 12 ವರ್ಷದವರಿಗೆ) ರೂ.500

3)ಮಂಗಳೂರು-ಕೊಲ್ಲೂರು ಪ್ಯಾಕೇಜ್ ಪ್ರವಾಸ (ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8):- ಮಂಗಳೂರು ಬಸ್ ನಿಲ್ದಾಣ – ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ- ಕಾಪು ಮಾರಿಯಮ್ಮ ದೇವಸ್ಥಾನ-ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ-ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಮಂಗಳೂರು ಬಸ್ ನಿಲ್ದಾಣ. ಪ್ರಯಾಣದರ ವಯಸ್ಕರಿಗೆ ರೂ.600, ಮಕ್ಕಳಿಗೆ (6ವರ್ಷದಿಂದ 12 ವರ್ಷದವರಿಗೆ) ರೂ.500.

4)ಮಂಗಳೂರು-ಸಿಗಂದೂರು ಪ್ಯಾಕೇಜ್ ಪ್ರವಾಸ (ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 7:30):-
ಮಂಗಳೂರು ಬಸ್ ನಿಲ್ದಾಣ–ಕುಂದಾಪುರ-ಸಿಗಂದೂರ ಶ್ರೀ ಚೌಡೇಶ್ವರಿ ದೇವಸ್ಥಾನ-ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ – ಮಂಗಳೂರು ಬಸ್ಸ್ ನಿಲ್ದಾಣ. ಪ್ರಯಾಣದರ ವಯಸ್ಕರಿಗೆ ರೂ.700 ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) ರೂ.600.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು: ಮಂಗಳೂರು-1ನೇ ಘಟಕ ವ್ಯವಸ್ಥಾಪಕರು : 7760990713, ಮಂಗಳೂರು-3ನೇ ಘಟಕ ವ್ಯವಸ್ಥಾಪಕರು : 7760990723, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್: 9663211553, ಮಂಗಳೂರು ಬಸ್ ನಿಲ್ದಾಣ: 7760990720, ವಿಭಾಗೀಯ ಕಛೇರಿ: 7760990711, 9663266221 , ಪ್ಯಾಕೇಜ್ ಪ್ರವಾಸಕ್ಕೆ ತಿತಿತಿ.ಞsಡಿಣಛಿ.iಟಿ ನಲ್ಲಿ ಮುಂಗಡ ಬುಕ್ಕಿಂಗ್ ವ್ಯವಸ್ಥೆ ಇರುತ್ತದೆ ಎಂದು ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles